ವಿಜಯಪುರ: ‘ಬ್ರಿಟಿಷರೇ ಭಾರತ ಬಿಟ್ಟು ತೊಲಗಿ ಘೋಷಣೆಯೊಂದಿಗೆ ಮಹಾತ್ಮ ಗಾಂಧೀಜಿ ಅವರು 1942 ಆಗಸ್ಟ್ 9ನೇ ತಾರೀಖಿನಂದು ಬ್ರಿಟಿಷರ ವಿರುದ್ಧ ಹೋರಾಟ ಪ್ರಾರಂಭಿಸಿದರು. ಮುಂದೆ ನಮಗೆ ಈ ಹೋರಾಟವೇ ಭಾರತ ಸ್ವಾತಂತ್ರ್ಯ ಹೊಂದಲು ಬುನಾದಿಯಾಯಿತು ಎಂದು ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಪ್ರೊ.ರಾಜು ಆಲಗೂರ ಹೇಳಿದರು.
ಜಿಲ್ಲಾ ಕಾಂಗ್ರೆಸ್ ಕಾರ್ಯಾಲಯದಲ್ಲಿ ಬುಧವಾರ ಆಯೋಜಿಸಿದ್ದ ‘ಬ್ರಿಟಿಷರೇ ಭಾರತ ಬಿಟ್ಟು ತೊಲಗಿ’(ಕ್ವಿಟ್ ಇಂಡಿಯಾ) ಚಳವಳಿಯ 81ನೇ ವರ್ಷಾಚರಣೆಯಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಅವರು ಮಾತನಾಡಿದರು.
‘ಗಾಂಧೀಜಿ ಹಮ್ಮಿಕೊಂಡ ಈ ಹೋರಾಟ ಬ್ರಿಟಿಷರನ್ನು ಭಾರತ ಬಿಟ್ಟು ತೊಲಗುವಂತೆ ಮಾಡಿತು. ಈ ಹೋರಾಟಗಳಲ್ಲಿ ಅನೇಕ ಜನ ಹೋರಾಟಗಾರರು ತಮ್ಮ ತ್ಯಾಗ, ಬಲಿದಾನ ಮಾಡಿ, ಇಂದು ನಾವು ಸ್ವತಂತ್ರವಾಗಿ ಬದುಕಲು ದಾರಿ ಮಾಡಿಕೊಟ್ಟರು. ಈ ಮಹಾಪುರುಷರು ಹಾಕಿಕೊಟ್ಟ ದಾರಿ ಅಮೋಘವಾಗಿದ್ದು, ನಾವು ಇಂದಿನ ಪೀಳಿಗೆಗೆ ಅರಿವು ಮೂಡಿಸುವ ಕೆಲಸ ಮಾಡಬೇಕಾಗಿದೆ’ ಎಂದು ಹೇಳಿದರು.
ಕೆಪಿಸಿಸಿ ಹಿಂದುಳಿದ ವರ್ಗಗಳ ಉಪಾಧ್ಯಕ್ಷ ಕೆ.ಎಫ್. ಅಂಕಲಗಿ, ಕೆಪಿಸಿಸಿ ಕಿಸಾನ್ ಘಟಕದ ಉಪಾಧ್ಯಕ್ಷ ಡಿ.ಎಚ್. ಕಲಾಲ, ಜಿಲ್ಲಾ ಉಪಾಧ್ಯಕ್ಷ ವೈಜನಾಥ ಕರ್ಪೂರಮಠ, ಮಹಾನಗರ ಪಾಲಿಕೆ ಸದಸ್ಯರಾದ ಆರತಿ ಶಹಾಪೂರ, ಜಿಲ್ಲಾ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಶಬ್ಬೀರ ಜಾಗೀರದಾರ ಮಾತನಾಡಿದರು.
ಕೆಪಿಸಿಸಿ ಸದಸ್ಯ ಅಬ್ದುಲ್‍ಹಮೀದ ಮುಶ್ರೀಫ್, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಚಾಂದಸಾಬ ಗಡಗಲಾವ, ಡಾ.ಗಂಗಾಧರ ಸಂಬಣ್ಣಿ, ಕೆಪಿಸಿಸಿ ಕಾರ್ಮಿಕ ಘಟಕದ ಪ್ರಧಾನ ಕಾರ್ಯದರ್ಶಿ ರಾಜಶೇಖರ ಯಡಹಳ್ಳಿ, ಬ್ಲಾಕ್ ಅಧ್ಯಕ್ಷರಾದ ಜಮೀರ ಅಹ್ಮದ ಬಕ್ಷಿ, ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ವಿದ್ಯಾರಾಣಿ ತುಂಗಳ, ರಾಜೇಶ್ವರಿ ಚೋಳಕೆ, ವಸಂತ ಹೊನಮೊಡೆ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.