ತಾಳಿಕೋಟಿ: ಪಟ್ಟಣದ ಪ್ರತಿಷ್ಠಿತ ತಾಳಿಕೋಟಿ ಸಹಕಾರಿ ಬ್ಯಾಂಕಿನ ನಿರ್ದೇಶಕ ಹಾಗೂ ಸ್ಥಳೀಯ ವೀರಶೈವ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿಗಳಾದ ಮುರಿಗೆಪ್ಪ ಸಂಗನಬಸಪ್ಪ ಸರಸೆಟ್ಟಿ 40 ವರ್ಷಗಳಿಂದ ಸಹಕಾರಿ ಕ್ಷೇತ್ರದಲ್ಲಿ ಸಲ್ಲಿಸಿದ ಸೇವೆ ಹಿನ್ನೆಲೆಯಲ್ಲಿ ಅವರಿಗೆ ಪ್ರಸ್ತುತ ಸಾಲಿನ ರಾಜ್ಯ ಸರ್ಕಾರ ಕೊಡುವ ಪ್ರತಿಷ್ಠಿತ ‘ಸಹಕಾರಿ ರತ್ನ’ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ನ.17 ರಂದು ಬಾಗಲಕೋಟೆಯಲ್ಲಿ ನಡೆಯಲಿರುವ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ, ಸಹಕಾರಿ ಸಚಿವ ಎನ್.ರಾಜಣ್ಣ, ಸಚಿವ ಶಿವಾನಂದ ಪಾಟೀಲ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.