ADVERTISEMENT

ಹಿಜಾಬ್‌ ‌| ಟಿಪ್ಪು ಸುಲ್ತಾನ್‌ ಎರಡನೇ ಅವತಾರ ಸಿದ್ದರಾಮಯ್ಯ: ಯತ್ನಾಳ ವಾಗ್ದಾಳಿ

​ಪ್ರಜಾವಾಣಿ ವಾರ್ತೆ
Published 23 ಡಿಸೆಂಬರ್ 2023, 12:37 IST
Last Updated 23 ಡಿಸೆಂಬರ್ 2023, 12:37 IST
<div class="paragraphs"><p>ಯತ್ನಾಳ</p></div>

ಯತ್ನಾಳ

   

ವಿಜಯಪುರ: ‘ಶಾಲಾ- ಕಾಲೇಜುಗಳಲ್ಲಿ ಹಿಜಾಬ್ ಧರಿಸಲು ಅವಕಾಶ ನೀಡಲಾಗುವುದು ಎಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಟಿಪ್ಪು ಸುಲ್ತಾನ್‌ನ ಎರಡನೇ ಅವತಾರ’ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ವಾಗ್ದಾಳಿ ನಡೆಸಿದರು.

ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಈ ತೀರ್ಮಾನ ಮುಸ್ಲಿಂ ತುಷ್ಟೀಕರಣದ ಪರಮಾವಧಿಯಾಗಿದೆ. ಕಾಂಗ್ರೆಸ್‌ನ ಈ ತುಷ್ಟಿಕರಣದಿಂದಲೇ ದೇಶ ಹಾಳಾಗಿದೆ ಎಂದರು.

ADVERTISEMENT

ಶಾಲಾ, ಕಾಲೇಜು ಮಕ್ಕಳಲ್ಲಿ ಸಮಾನತೆ ಮೂಡಿಸುವುದಕ್ಕಾಗಿ ಸಮವಸ್ತ್ರ ವ್ಯವಸ್ಥೆ ಜಾರಿಯಲ್ಲಿದೆ. ಒಂದು ವೇಳೆ ಸರ್ಕಾರ ಹಿಜಾಬ್‌ಗೆ ಅವಕಾಶ ನೀಡಿದರೆ, ಹಿಂದೂವಿದ್ಯಾರ್ಥಿಗಳು ಕೇಸರಿ ವಸ್ತ್ರ ಧರಿಸಿ, ಹಣೆಗೆ ತಿಲಕ ಇಟ್ಟುಕೊಂಡು ಬರುತ್ತಾರೆ. ಆಗ ಸಂಘರ್ಷದ ಹಾದಿಗೆ ಸರ್ಕಾರವೇ ಅವಕಾಶ ಕಲ್ಪಿಸಿಕೊಟ್ಟಂತಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮುಸ್ಲಿಮರಷ್ಟೇ ಕಾಂಗ್ರೆಸ್‌ಗೆ ವೋಟ್‌ ಹಾಕುತ್ತಾರೆ ಎಂಬ ಕಲ್ಪನೆ ಸಿದ್ದರಾಮಯ್ಯ ಅವರ ತಲೆಯಲ್ಲಿದೆ. ಕೊನೆಗೆ ಮುಸ್ಲಿಮರ ವೋಟುಗಳಷ್ಟೇ ಕಾಂಗ್ರೆಸ್‌ಗೆ ಬೀಳಲಿದೆ. ಸಮಸ್ತ ಹಿಂದೂಗಳೆಲ್ಲರೂ ಬಿಜೆಪಿಗೆ ವೋಟ್‌ ಹಾಕಿ, ಮತ್ತೆ ಅಧಿಕಾರಕ್ಕೆ ತರಲಿದ್ದಾರೆ ಎಂದರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.