ADVERTISEMENT

ಎಸ್‌ಐಟಿ ಡಿ.ಕೆ.ಶಿವಕುಮಾರ್‌ ಏಜೆಂಟ್‌: ಯತ್ನಾಳ ಆರೋಪ

​ಪ್ರಜಾವಾಣಿ ವಾರ್ತೆ
Published 7 ಮೇ 2024, 13:58 IST
Last Updated 7 ಮೇ 2024, 13:58 IST
ಬಸನಗೌಡ ಪಾಟೀಲ ಯತ್ನಾಳ
ಬಸನಗೌಡ ಪಾಟೀಲ ಯತ್ನಾಳ   

ವಿಜಯಪುರ: ‘ಪ್ರಜ್ವಲ್‌ ರೇವಣ್ಣ ಪ್ರಕರಣವನ್ನು ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ದಳ (ಎಸ್‌ಐಟಿ) ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಏಜೆಂಟ್ ರೀತಿ ಕೆಲಸ ಮಾಡುತ್ತಿದೆ. ಎಸ್‌ಐಟಿ ಅಧಿಕಾರಿಗಳು ಡಿ.ಕೆ.ಶಿವಕುಮಾರ್ ನಿಯಂತ್ರಣದಲ್ಲಿ ಇದ್ದಾರೆ’ ಎಂದು ಬಿಜೆ‍ಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ತಿಳಿಸಿದರು.

‘ಎಸ್‌ಐಟಿ ತನಿಖೆಯಿಂದ ಪ್ರಕರಣಕ್ಕೆ ನ್ಯಾಯ ಸಿಗುವುದಿಲ್ಲ. ಸತ್ಯಾಸತ್ಯತೆ ಸ್ಪಷ್ಟವಾಗಿ ತಿಳಿಯಬೇಕಾದರೆ, ತನಿಖೆ ಪ್ರಕ್ರಿಯೆಯನ್ನು ಸಿಬಿಐಗೆ ವಹಿಸಬೇಕು’ ಎಂದು ಅವರು ಮಂಗಳವಾರ ಸುದ್ದಿಗಾರರಿಗೆ ತಿಳಿಸಿದ

‘ಪ್ರಜ್ವಲ್‌ ಪ್ರಕರಣವು ಬಿಜೆಪಿ ಗೆಲುವಿನ ಮೇಲೆ ಪರಿಣಾಮ ಬೀರಲ್ಲ. ಈ ಪ್ರಕರಣವು ಜೆಡಿಎಸ್–ಕಾಂಗ್ರೆಸ್‌ ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ನಡೆದಿದ್ದು, ಇದಕ್ಕೂ ಬಿಜೆಪಿಗೂ ಯಾವುದೇ ಸಂಬಂಧವಿಲ್ಲ’ ಎಂದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.