ಇಂಡಿ: ತಾಲ್ಲೂಕಿನ ಅಲ್ಲಲ್ಲಿ ದನಕರುಗಳಿಗೆ ಚರ್ಮಗಂಟು ರೋಗ ಕಾಣಿಸಿಕೊಳ್ಳುತ್ತಿದ್ದು, ರೈತರು ಜಾಗೃತಿಯಿಂದ ಇರುವಂತೆ ಮುಖ್ಯ ಪಶು ವೈದ್ಯಾಧಿಕಾರಿ ರಾಜಕುಮಾರ ಅಡಕಿ ಮತ್ತು ತಹಶೀಲ್ದಾರ್ ಬಿ.ಎಸ್.ಕಡಕಬಾವಿ ತಿಳಿಸಿದ್ದಾರೆ.
ಈ ಹಿಂದೆ ಚರ್ಮಗಂಟು ರೋಗ ಕಾಣಿಸಿಕೊಂಡಾಗ ಲಸಿಕೆ ನೀಡಲಾಗಿದ್ದು, ಸದ್ಯ ರೋಗ ಹರಡುವ ಸಾಧ್ಯತೆ ಕಡಿಮೆ ಇದೆ ಎಂದು ರಾಜಕುಮಾರ ಅಡಕಿ ತಿಳಿಸಿದ್ದಾರೆ.
ಒಂದು ಪ್ರಾಣಿಯಿಂದ ಇನ್ನೊಂದು ಪ್ರಾಣಿಗೆ ರೋಗ ಹರಡುವುದರಿಂದ ಮತ್ತು ಬಿಸಿಲಿಗೆ ರೋಗದ ಪ್ರಮಾಣ ಹೆಚ್ಚಾಗುವುದರಿಂದ ತಾಲ್ಲೂಕಿನಲ್ಲಿ ನಡೆಯುವ ಜಾನುವಾರು ಸಂತೆಗಳನ್ನು ನಡೆಸದಿರುವಂತೆ ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ಸೂಚಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.