ವಿಜಯಪುರ: ಸಮಾಜವಾದಿ ಹೋರಾಟಗಾರ ಸದಾನಂದ ಮೋದಿ (68) ಬುಧವಾರ ಬೆಳಿಗ್ಗೆ ನಿಧನರಾದರು. ಅವರಿಗೆ ಪತ್ನಿ, ಪುತ್ರ, ಇಬ್ಬರು ಪುತ್ರಿಯರು ಇದ್ದಾರೆ.
ಸದಾನಂದ ಮೋದಿ ಅವರು ವಿದ್ಯಾರ್ಥಿ ದೆಸೆಯಲ್ಲೇ ಮಾರ್ಕ್ಸ್‌ವಾದಿ ಸಿದ್ಧಾಂತದಿಂದ ಪ್ರಭಾವಿತರಾಗಿ ಚಳವಳಿಗೆ ಧುಮುಕಿದ್ದರು. ಎಸ್‌ಎಫ್‌ಐ, ಡಿವೈಎಫ್‌ಐ ಸಂಘಟನೆಗಳ ಮೂಲಕ ಅನೇಕ ಹೋರಾಟಗಳಲ್ಲಿ ಭಾಗವಹಿಸಿದ್ದರು.
ವಿಜಯಪುರ ನಗರದಲ್ಲಿ ನಡೆದ ‘ದಾನಮ್ಮ ಪ್ರಕರಣ’ದಲ್ಲಿ ಆಕೆಗೆ ನ್ಯಾಯ ಒದಗಿಸಲು ನಡೆದ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದರು.
ರಾಜ್ಯದೆಲ್ಲೆಡೆ ನಡೆಯುವ ಪ್ರಗತಿಪರ ಹೋರಾಟಗಳಲ್ಲಿ ಭಾಗವಹಿಸುತ್ತಿದ್ದ ಅವರು, ಜಿಲ್ಲೆ ಹಾಗೂ ರಾಜ್ಯದ ಎಲ್ಲಾ ಪ್ರಗತಿಪರ, ದಲಿತ ಸಂಘಟನೆಗಳ ಜೊತೆಯಲ್ಲಿ ನಿಕಟ ಒಡನಾಟ ಹೊಂದಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.