ADVERTISEMENT

ಹೊಸ ಪಡಿತರ ಚೀಟಿ ಆನ್‍ಲೈನ್ ಪ್ರಕ್ರಿಯೆ ಆರಂಭಿಸಿ

​ಪ್ರಜಾವಾಣಿ ವಾರ್ತೆ
Published 19 ಜೂನ್ 2024, 16:07 IST
Last Updated 19 ಜೂನ್ 2024, 16:07 IST

ವಿಜಯಪುರ: ರಾಜ್ಯ ಸರ್ಕಾರ ಕಡು ಬಡವರಿಗೆ ನೀಡುವ ಬಿಪಿಎಲ್ ಪಡಿತರ ಚೀಟಿ ವಿತರಣೆಗೆ ಆನ್‌ಲೈನ್‌ ಮೂಲಕ ಅರ್ಜಿ ಪ್ರಕ್ರಿಯೆ ಆರಂಭಿಸುವಂತೆ ರಾಜೀವಗಾಂಧಿ ಬಡವರ ಸಂಘದ ಅಧ್ಯಕ್ಷ ಇಬ್ರಾಹಿಂ ಎಂ. ಶಿವಣಗಿ ಒತ್ತಾಯಿಸಿದ್ದಾರೆ.

ಈ ಕುರಿತು ಪ್ರಕಟಣೆಯಲ್ಲಿ ತಿಳಿಸಿರುವ ಅವರು, ಬಡವರಿಗೆ ಆಹಾರ, ಆರೋಗ್ಯ, ಶಿಕ್ಷಣ, ಸಾಲ ಸೌಲಭ್ಯ ಪಡೆಯಲು ಬಿ.ಪಿ.ಎಲ್. ಪಡಿತರ ಚೀಟಿ ಅಗತ್ಯ. ಸರ್ಕಾರ ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸುವ ಆನ್‍ಲೈನ್ ಪ್ರಕ್ರಿಯೆ ಬಂದ್ ಮಾಡಿದ್ದು, ಜನರು ಸಂಕಷ್ಟ ಅನುಭವಿಸುವಂತಾಗಿದೆ.

ಇತ್ತೀಚಿಗೆ ಗ್ಯಾರಂಟಿ ಯೋಜನೆಗಳ ಜಾರಿ ನಂತರ ಪಡಿತರ ಚೀಟಿಯ ಆನ್‍ಲೈನ್ ಪ್ರಕ್ರಿಯೆ ಸಂಪೂರ್ಣ ಸ್ಥಗಿತಗೊಳಿಸಲಾಗಿದೆ. ಇನ್ನು ಲಕ್ಷಾಂತರ ಬಡವರು ಸರ್ಕಾರದ ಗ್ಯಾರಂಟಿ ಯೋಜನೆಗಳ ಸದುಪಯೋಗ ಪಡೆದುಕೊಂಡಿಲ್ಲ. ಸರ್ಕಾರ ಜೂನ್ 15 ರಿಂದ ಆನ್‍ಲೈನ್ ಪ್ರಕ್ರಿಯೆ ಪ್ರಾರಂಭಿಸುವುದಾಗಿ ಹೇಳಿತ್ತು, ಆದರೇ ಈವರೆಗೆ ಬಿ.ಪಿ.ಎಲ್. ಪಡಿತರ ಚೀಟಿಗಾಗಿ ಆನ್‍ಲೈನ್ ಪ್ರಕ್ರಿಯೆ ಪ್ರಾರಂಭಿಸಿಲ್ಲ.

ADVERTISEMENT

ಸರ್ಕಾರ ಶೀಘ್ರ ಬಿ.ಪಿ.ಎಲ್. ಪಡಿತರ ಚೀಟಿಗಾಗಿ ಆನ್‍ಲೈನ್ ಪ್ರಕ್ರಿಯೆ ಪ್ರಾರಂಭಿಸಿ ಬಡವರು ಸದುಪಯೋಗ ಪಡೆದುಕೊಳ್ಳಲು ಕ್ರಮ ಕೈಗೊಳ್ಳಬೇಕು ಎಂದು ಪ್ರಕಟಣೆಯಲ್ಲಿ ಆಗ್ರಹಿಸಿದ್ದಾರೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.