ವಿಜಯಪುರ: ನಗರದ ಹೊರವಲಯದಲ್ಲಿರುವ ಶ್ರೀ ಸಿದ್ಧೇಶ್ವರ ಬಡಾವಣೆಯ ಮನೆಯೊಂದರಲ್ಲಿ ಬುಧವಾರ ನವದಂಪತಿ ನೇಣಿಗೆ ಶರಣಾಗಿದ್ದಾರೆ.
ಮನೋಜಕುಮಾರ ಪೋಳ (30) ಮತ್ತು ರಾಖಿ (23) ನೇಣಿಗೆ ಶರಣಾದ ಜೋಡಿ. ನಾಲ್ಕು ತಿಂಗಳ ಹಿಂದೆ ಪರಸ್ಪರ ಪ್ರೀತಿಸಿ ಮದುವೆಯಾಗಿದ್ದರು. ಮಂಗಳವಾರ ತಡರಾತ್ರಿ ನೇಣಿ ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮನೋಜಕುಮಾರ ತಾಯಿ ಭಾರತಿ ಮಗಳ ಊರಿಗೆ ಹೋಗಿದ್ದರು. ನವ ದಂಪತಿ ಮಾತ್ರ ಮನೆಯಲ್ಲಿದ್ದರು. ಭಾರತಿ ಬುಧವಾರ ಬೆಳಿಗ್ಗೆ ವಾಪಸ್ ಮನೆಗೆ ಬಂದಾಗ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.
ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಜಲನಗರ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.