ADVERTISEMENT

ಸಿದ್ದರಾಮಯ್ಯ ಪರ ಹೈಕಮಾಂಡ್‌ ಇದೆ: ಜಮೀರ್ ಅಹ್ಮದ್ ಖಾನ್‌

​ಪ್ರಜಾವಾಣಿ ವಾರ್ತೆ
Published 7 ಅಕ್ಟೋಬರ್ 2024, 14:09 IST
Last Updated 7 ಅಕ್ಟೋಬರ್ 2024, 14:09 IST
ಸಚಿವ ಜಮೀರ್ ಅಹ್ಮದ್ ಖಾನ್‌
ಸಚಿವ ಜಮೀರ್ ಅಹ್ಮದ್ ಖಾನ್‌   

ವಿಜಯಪುರ: ‘ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ, ಕಾಂಗ್ರೆಸ್ ಪಕ್ಷದ ಹೈಕಮಾಂಡ್ ಸಿದ್ಧರಾಮಯ್ಯ ಪರ ಇದೆ’ ಎಂದು ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹ್ಮದ್ ಖಾನ್‌ ಹೇಳಿದರು.

ವಿಜಯ ದಶಮಿ ಬಳಿಕ ಸಿಎಂ ರಾಜೀನಾಮೆ ನೀಡುವರೆಂಬ ಬಿಜೆಪಿ ರಾಜ್ಯಘಟಕದ ಅಧ್ಯಕ್ಷ ವಿಜಯೇಂದ್ರ ಹೇಳಿಕೆಗೆ ಸಂಬಂಧಿಸಿದಂತೆ ಸೋಮವಾರ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ‘ಸಿದ್ದರಾಮಯ್ಯ ರಾಜೀನಾಮೆ ಕುರಿತು ಕಾಂಗ್ರೆಸ್‌ ಹೈಕಮಾಂಡ್ ಹೇಳಬೇಕು, ವಿಜಯೇಂದ್ರ ಕಾಂಗ್ರೆಸ್ ಹೈಕಮಾಂಡಾ’ ಎಂದು ಪ್ರಶ್ನಿಸಿದರು.

‘ನಮ್ಮ ಪಕ್ಷದ ಹೈಕಮಾಂಡ್ ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಜೊತೆಗಿದ್ದೇವೆ ಎಂದು ಹೇಳಿದ್ದಾರೆ’ ಎಂದರು.

ADVERTISEMENT

ಬಹಿರಂಗ ಕಾರ್ಯಕ್ರಮದಲ್ಲಿ ಸತೀಶ ಜಾರಕಿಹೊಳಿ ಸಮ್ಮುಖದಲ್ಲಿಯೇ ಮುಂದಿನ ಸಿ.ಎಂ ಘೋಷಣೆ ಕೂಗಿರುವ ಕುರಿತು ಪ್ರತಿಕ್ರಿಯಿಸಿದ ಅವರು, ‘ಅಭಿಮಾನಿಗಳು ಕೂಗಿದ ತಕ್ಷಣ ಸಿ.ಎಂ ಆಗಲು ಸಾಧ್ಯವಿಲ್ಲ. ನನ್ನ ಅಭಿಮಾನಿಗಳು ಕೂಗುತ್ತಾರೆ, ನಾನು ಸಿ.ಎಂ ಆಗಿ ಬಿಡ್ತೀನಾ’ ಎಂದು ಪ್ರಶ್ನಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.