ವಿಜಯಪುರ:ಭೀಮಾ ತೀರದ ರೌಡಿ ಗಂಗಾಧರ ಚಡಚಣನ ನಿಗೂಢ ಹತ್ಯೆಯಲ್ಲಿ ಬಳಸಲಾಗಿದೆ ಎನ್ನಲಾದ ಸ್ಕಾರ್ಪಿಯೋ ಜೀಪ್‌ನ್ನು ಸಿಐಡಿ ಪೊಲೀಸರು ನೆರೆಯ ಮಹಾರಾಷ್ಟ್ರದ ದಕ್ಷಿಣ ಸೊಲ್ಲಾಪುರದ ಕೇಗಾಂವ ಗ್ರಾಮದಲ್ಲಿ ವಶಕ್ಕೆ ಪಡೆದಿದ್ದಾರೆ.
ಹತ್ಯೆಯ ಸಂದರ್ಭ ಆರೋಪಿಗಳು ಉದ್ದೇಶ ಪೂರ್ವಕವಾಗಿ ಜೀಪ್‌ನ ನಂಬರ್ ಪ್ಲೇಟ್ ಬದಲಾಯಿಸಿ, ನಕಲಿ ನಂಬರ್ ಪ್ಲೇಟ್ ಬಳಸಿದ್ದರು. ಈ ನಂಬರ್ ಸೊಲ್ಲಾಪುರದ ಆರಾಧ್ಯ ಎಂಬುವವರಿಗೆ ಸೇರಿದ್ದು ಎಂಬುದು ತನಿಖೆಯಲ್ಲಿ ಪತ್ತೆಯಾಗಿದೆ ಎಂದು ಸಿಐಡಿ ಮೂಲಗಳು ತಿಳಿಸಿವೆ.
ಪ್ರಕರಣದ ಪ್ರಮುಖ ಆರೋಪಿ ಮಹಾದೇವ ಭೈರಗೊಂಡ ಅಳಿಯ ಸಿದ್ಧಗೊಂಡಪ್ಪ ಮುಡವೆ ಬಳಸುತ್ತಿದ್ದ ಜೀಪ್ ಇದು ಎಂದು ಸ್ಥಳೀಯರು ತಿಳಿಸಿದ್ದಾರೆ. ಮುಡವೆ ಸಹ ಪ್ರಕರಣದಲ್ಲಿ ಆರೋಪಿಯಾಗಿದ್ದು, ನ್ಯಾಯಾಂಗ ಬಂಧನದಲ್ಲಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.