ವಿಜಯಪುರ: ಶಾಲಾ ವಾಹನ, ಆಟೊಗಳಲ್ಲಿ ನಿಗದಿಪಡಿಸಿರುವುದಕ್ಕಿಂತ ಹೆಚ್ಚು ಮಕ್ಕಳನ್ನು ಕರೆದೊಯ್ದರೆ ಪರವಾನಗಿ ರದ್ದುಗೊಳಿಸಲಾಗುವುದು ಎಂದು ಜಿಲ್ಲಾ ಪೊಲೀಸರು ಎಚ್ಚರಿಕೆ ನೀಡಿದ್ದಾರೆ.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರಕಾಶ್ ನಿಕ್ಕಂ ಅವರ ಸೂಚನೆ ಹಾಗೂ ಮಾರ್ಗದರ್ಶನದಂತೆ ವಿಜಯಪುರ ನಗರ, ಬಸವನಬಾಗೇವಾಡಿ ಹಾಗೂ ಇಂಡಿ ಪಟ್ಟಣದಲ್ಲಿ ಆಟೊ–ಓಮ್ನಿ ಹಾಗೂ ಮಕ್ಕಳನ್ನು ಕರೆದೊಯ್ಯುವ ಖಾಸಗಿ ವಾಹನಗಳನ್ನು ಶುಕ್ರವಾರ ತಪಾಸಣೆಗೆ ಒಳಪಡಿಸಿದ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ. ಒಂದೊಮ್ಮೆ ನಿಯಮ ಮೀರಿ ಹೆಚ್ಚು ಮಕ್ಕಳನ್ನು ಸಾಗಿಸಿದರೆ ಮುಲಾಜಿಲ್ಲದೆ ಕ್ರಮಕೈಗೊಳ್ಳಲಾಗುವುದು ಎಂದು ಸೂಚಿಸಿದ್ದಾರೆ.
ಸಭೆಯಲ್ಲಿ ಚರ್ಚೆ: ಈ ಕುರಿತು ಸಾರ್ವಜನಿಕ ಶಿಕ್ಷಣ ಇಲಾಖೆ, ಪದವಿಪೂರ್ವ ಶಿಕ್ಷಣ ಇಲಾಖೆ, ಪ್ರಾದೇಶಿಕ ಸಾರಿಗೆ ಆಯುಕ್ತರು, ಕ್ಷೇತ್ರ ಶಿಕ್ಷಣಾಧಿಕಾರಿಗಳ ಸಭೆ ನಡೆಸಿರುವ ಪ್ರಕಾಶ್ ನಿಕ್ಕಂ, ಮಕ್ಕಳ ಸುರಕ್ಷತೆಗೆ ಬಗ್ಗೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಮಾಹಿತಿ ನೀಡಿದರು. ಪ್ರಕರಣ ಮರುಕಳಿಸಿದಲ್ಲಿ ಶಿಕ್ಷೆ ಖಚಿತ ಎಂಬ ಖಡಕ್ ಸಂದೇಶವನ್ನು ರವಾನಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.