ಆಲಮಟ್ಟಿ: ಮಹಾರಾಷ್ಟ್ರ ಹಾಗೂ ಕರ್ನಾಟಕದ ಕೃಷ್ಣಾ ಜಲಾನಯನ ಪ್ರದೇಶದಲ್ಲಿ ಮಳೆ ಪ್ರಮಾಣ ಹೆಚ್ಚಿದ್ದರಿಂದ, ಆಲಮಟ್ಟಿ ಜಲಾಶಯಕ್ಕೆ ಭಾನುವಾರ ಒಂದೇ ದಿನ 1,07,769 ಕ್ಯುಸೆಕ್ ನೀರು (9.3 ಟಿಎಂಸಿ ಅಡಿ) ನೀರು ಹರಿದು ಬಂದಿದೆ.
ಭಾನುವಾರ ಸಂಜೆ 6ಕ್ಕೆ ಲಭ್ಯವಾದ ಮಾಹಿತಿಯ ಪ್ರಕಾರ 123.081 ಟಿಎಂಸಿ ಅಡಿ ಸಾಮರ್ಥ್ಯದ ಆಲಮಟ್ಟಿ ಜಲಾಶಯದಲ್ಲಿ 57 ಟಿಎಂಸಿ ಅಡಿ ನೀರು ಸಂಗ್ರಹವಾಗಿದೆ. 514.30 ಮೀ. ವರೆಗೆ ನೀರು ಸಂಗ್ರಹವಾಗಿದೆ. ಕೇವಲ ಒಂದೇ ವಾರದಲ್ಲಿ ಜಲಾಶಯ ಬಹುತೇಕ ಅರ್ಧ ಭರ್ತಿಯಾದಂತಾಗಿದೆ.
ಆಲಮಟ್ಟಿ ಜಲಾಶಯದ ಒಳಹರಿವು ಸಂಜೆಯ ವೇಳೆಗೆ 1,16,648 ಕ್ಯುಸೆಕ್‌ಗೆ ಹೆಚ್ಚಾಗಿದೆ. ಜಲಾಶಯದ ಬಲಭಾಗದ ಆಲಮಟ್ಟಿ ವಿದ್ಯುತ್ ಘಟಕದ ಮೂಲಕ 6000 ಕ್ಯುಸೆಕ್ ನೀರನ್ನು ನದಿ ಪಾತ್ರಕ್ಕೆ ಹರಿಸಲಾಗುತ್ತಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.