ವಿಜಯಪುರ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಪರಿಶಿಷ್ಟ ಜಾತಿಯ ವಿಶೇಷ ಘಟಕ ಹಾಗೂ ಗಿರಿಜನ ಉಪಯೋಜನೆಯಡಿ ಪತ್ರಿಕೋದ್ಯಮದಲ್ಲಿ ಪದವಿ, ಸ್ನಾತಕೋತ್ತರ ಪದವಿ ಪಡೆದ ಹಾಗೂ ಕಂಪ್ಯೂಟರ್ ಜ್ಞಾನಹೊಂದಿದ ಪರಿಶಿಷ್ಟ ಜಾತಿ-ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಂದ 12 ತಿಂಗಳ ಅಪ್ರೆಂಟಿಶಿಪ್ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ವಿಜಯಪುರ ಜಿಲ್ಲಾ ಕಚೇರಿಯಲ್ಲಿ ತಲಾ ಒಂದು ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳನ್ನು ಅಪ್ರೆಂಟಿಶಿಪ್ ತರಬೇತಿಗೆ ಆಯ್ಕೆ ಮಾಡಲು ಅರ್ಜಿ ಆಹ್ವಾನಿಸಲಾಗಿದ್ದು, ತರಬೇತಿಗೆ ಮೆರಿಟ್ ಹಾಗೂ ಸಂದರ್ಶನ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು. ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಧ್ಯಮ ಅಕಾಡೆಮಿ ಮೂಲಕ ತರಬೇತಿ ಭತ್ಯೆ ನೀಡಲಾಗುವುದು.
ಆಸಕ್ತರು ನಿಗದಿತ ನಮೂನೆಯಲ್ಲಿ ಅರ್ಜಿಯನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ನ.30ರೊಳಗೆ ನಗರದ ಕಂದಗಲ್ ಹನುಮಂತರಾಯ ರಂಗಮಂದಿರ ಆವರಣದಲ್ಲಿರುವ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಕಚೇರಿಗೆ ಸಂಪರ್ಕಿಸುವಂತೆ ಸಹಾಯಕ ನಿರ್ದೇಶಕ ಅಮರೇಶ ದೊಡಮನಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.