ADVERTISEMENT

ದ್ರಾಕ್ಷಿ: ಬೆಳೆ ವಿಮೆಗೆ ನೋಂದಾಯಿಸಲು ಆಹ್ವಾನ

​ಪ್ರಜಾವಾಣಿ ವಾರ್ತೆ
Published 11 ಜುಲೈ 2024, 15:35 IST
Last Updated 11 ಜುಲೈ 2024, 15:35 IST
ದ್ರಾಕ್ಷಿ
ದ್ರಾಕ್ಷಿ   

ವಿಜಯಪುರ: ಪ್ರಸಕ್ತ 2024-25 ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಜಿಲ್ಲೆಗೆ ದ್ರಾಕ್ಷಿ ಬೆಳೆಗೆ ಮರುವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆಯನ್ನು ಅನುಷ್ಠಾನಗೊಳಿಸಲು ಅಧಿಸೂಚನೆ ಹೊರಡಿಸಲಾಗಿದೆ.

ಬೆಳೆ ಸಾಲ ಪಡೆದ ರೈತರು ಹಾಗೂ ಬೆಳೆ ಸಾಲ ಪಡೆಯದೆ ಇರುವ ರೈತರು ತಮ್ಮ ಆಧಾರ್‌ ಕಾರ್ಡ್‌ ಝರಾಕ್ಸ್‌, ಪಹಣಿ ಪತ್ರಿಕೆ ಹಾಗೂ ಬ್ಯಾಂಕ್ ಪಾಸ್‍ಬುಕ್ ಪ್ರತಿಯೊಂದಿಗೆ ಹತ್ತಿರದ ಬ್ಯಾಂಕುಗಳಲ್ಲಿ ಅಥವಾ ಗ್ರಾಮ ಒನ್ ಕೇಂದ್ರ ಅಥವಾ ಸಿಎಸ್‍ಸಿ ಸೆಂಟರ್‌ಳಲ್ಲಿ ವಿಮಾ ಯೋಜನೆಯಡಿ ನೋಂದಾಯಿಸಿಕೊಳ್ಳಬಹುದಾಗಿದೆ.

ದ್ರಾಕ್ಷಿ ಬೆಳೆಗೆ ವಿಮೆ ನೋಂದಾಯಿಸಿಕೊಳ್ಳಲು ಜುಲೈ 15 ಕೊನೆಯ ದಿನಾಂಕವಾಗಿದೆ. ವಿಮಾ ಕಂತಿನ ಮೊತ್ತ ₹ 14ಸಾವಿರವಾಗಿದೆ. ರೈತರು ಕಡ್ಡಾಯವಾಗಿ ಎಫ್‍ಐಡಿ  ಹಾಗೂ ಎನ್‍ಪಿಸಿಐ ಸಿಡಿಂಗ್ ಮಾಡಿಸಿರಬೇಕು.

ADVERTISEMENT

ಹೆಚ್ಚಿನ ಮಾಹಿತಿಗಾಗಿ ತೋಟಗಾರಿಕೆ ಇಲಾಖೆ, ರೈತ ಸಂಪರ್ಕ ಕೇಂದ್ರದ ಅಧಿಕಾರಿ ಹಾಗೂ ಹತ್ತಿರದ ಬ್ಯಾಂಕ್ ಶಾಖೆ, ಅಗ್ರಿಕಲ್ಚರ್‌ ಇನ್‌ಶ್ಯೂರೆನ್ಸ್‌ ಕಂಪನಿ ವಿಮಾ ಸಂಸ್ಥೆಯ ಪ್ರತಿನಿಧಿ ಮೊಬೈಲ್ ನಂ: 8899887873, ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ವಿಜಯಪುರ - 9535185999, ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಇಂಡಿ - 9008404041, ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಸಿಂದಗಿ- 8197464675, ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಬ.ಬಾಗೇವಾಡಿ - 9845215362, ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು (ಮುದ್ದೇಬಿಹಾಳ - 8123686903 ಇವರನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.