ವಿಜಯಪುರ: ಅಕ್ಟೋಬರ್ 28ರಂದು ನಡೆದಿರುವ ವಿಜಯಪುರ ಮಹಾನಗರ ಪಾಲಿಕೆಯ ಚುನಾವಣೆಯ ಮತ ಎಣಿಕೆ ಕಾರ್ಯ ಸೋಮವಾರ ಬೆಳಿಗ್ಗೆ ಆರಂಭವಾಗಿದೆ. ನಗರದ ದರ್ಬಾರ್ ಹೈಸ್ಕೂಲಿನ ಒಟ್ಟು 7 ಕೊಠಡಿಗಳಲ್ಲಿ ಮತ ಎಣಿಕೆ ನಡೆಯುತ್ತಿದೆ.
ಪ್ರತಿ ಕೊಠಡಿಯಲ್ಲಿ ಒಟ್ಟು 5 ಟೇಬಲ್‍ಗಳ ವ್ಯವಸ್ಥೆ ಮಾಡಲಾಗಿದೆ. ಒಟ್ಟಾರೆ 35 ಟೇಬಲ್‍ಗಳ ವ್ಯವಸ್ಥೆ ಮಾಡಲಾಗಿದೆ.
ಪ್ರತಿ ವಾರ್ಡ್‌ಗೆ ಒಂದು ಟೇಬಲ್ ವ್ಯವಸ್ಥೆ ಮಾಡಿದ್ದು, ಎಲ್ಲ ವಾರ್ಡ್ ಗಳ ಮತ ಎಣಿಕೆ ಕಾರ್ಯ ಏಕಕಾಲದಲ್ಲಿ ಆರಂಭಿಸಲಾಗಿದೆ.
ಮತ ಎಣಿಕೆ ನಡೆಯುತ್ತಿರುವ ದರ್ಬಾರ್ ಶಿಕ್ಷಣ ಸಂಸ್ಥೆಯ ಹೊರ ಭಾಗದಲ್ಲಿ ವಿವಿಧ ಪಕ್ಷಗಳ ಸಾವಿರಾರು ಜನರು ಫಲಿತಾಂಶಕ್ಕಾಗಿ ಕಾದು ನಿಂತಿದ್ದಾರೆ.
179 ಸಿಬ್ಬಂದಿ:
ಮಹಾನಗರ ಪಾಲಿಕೆಯ 35 ವಾರ್ಡ್‌ಗಳ ಚುನಾವಣೆಯ ಮತ ಎಣಿಕೆ ಕಾರ್ಯಕ್ಕೆ 35 ಮತ ಎಣಿಕೆ ಮೇಲ್ವಿಚಾರಕರು, 35 ಮತ ಎಣಿಕೆ ಸಹಾಯಕರು, 07 ಮತ ಎಣಿಕೆ ಡಾಟಾ ಎಂಟ್ರಿ ಮೇಲ್ವಿಚಾರಕರು, 07 ಕಂಪ್ಯೂಟರ್ ಆಪರೇಟರ್, 35 ವಿದ್ಯುನ್ಮಾನ ಮತಯಂತ್ರಗಳನ್ನು ಸಾಗಿಸುವ ಸಿಬ್ಬಂದಿ ಹಾಗೂ ಇತರೆ ಕಾರ್ಯಗಳಿಗಾಗಿ 60 ಜನರು ಸೇರಿದಂತೆ 179 ಜನರನ್ನು ನಿಯೋಜಿಸಲಾಗಿದೆ.
ಪೊಲೀಸ್ ಬಂದೋಬಸ್ತ್:
ಮತ ಎಣಿಕೆಗೆ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದ್ದು, 3 ಡಿವೈಎಸ್‍ಪಿ, 8 ಸಿಪಿಐ, 32 ಪಿಎಸ್‍ಐ, 35 ಎಎಸ್‍ಐ, 76 ಹೆಡ್ ಕಾನ್‌ಸ್ಟೆಬಲ್, 128 ಪೊಲೀಸ್ ಕಾನ್‌ಸ್ಟೆಬಲ್, 17 ಮಹಿಳಾ ಪೊಲೀಸ್ ಕಾನ್‌ಸ್ಟೆಬಲ್, 04 ಐ.ಆರ್.ಬಿ. ಹಾಗೂ 06 ಡಿಎಆರ್ ತುಕಡಿಗಳನ್ನು ಪೊಲೀಸ್ ಇಲಾಖೆಯಿಂದ ನಿಯೋಜಿಸಲಾಗಿದೆ.
ಮತ ಎಣಿಕೆ ಕೇಂದ್ರ ಪ್ರವೇಶ:
ಮತ ಎಣಿಕೆ ಕೇಂದ್ರದಲ್ಲಿ ಎಣಿಕೆ ಕಾರ್ಯಕ್ಕೆ ನಿಯೋಜಿಸಲಾದ ಅಧಿಕಾರಿ-ಸಿಬ್ಬಂದಿ, ರಾಜ್ಯ ಚುನಾವಣಾ ಆಯೋಗದಿಂದ ಅನುಮತಿ ಹೊಂದಿದ ವ್ಯಕ್ತಿಗಳು ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳಿಂದ ಅಧಿಕೃತ ಪಾಸ್ ಪಡೆದ ಮಾಧ್ಯಮದವರು, ಸ್ಪರ್ಧಿಸಿದ ಅಭ್ಯರ್ಥಿ, ಅವರ ಚುನಾವಣಾ ಏಜೆಂಟರು ಮತ್ತು ಮತ ಎಣಿಕೆ ಏಜೆಂಟರಿಗೆ ಮಾತ್ರ ಪ್ರವೇಶಾವಕಾಶಕಲ್ಪಿಸಲಾಗಿದೆ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.