ADVERTISEMENT

ಮದ್ಯ ಅಕ್ರಮ ಮಾರಾಟ ನಿಷೇಧಕ್ಕೆ ಮಹಿಳೆಯರ ಆಗ್ರಹ: ಸಾಮೂಹಿಕ ಆತ್ಮಹತ್ಯೆ ಎಚ್ಚರಿಕೆ

​ಪ್ರಜಾವಾಣಿ ವಾರ್ತೆ
Published 24 ಜೂನ್ 2024, 15:21 IST
Last Updated 24 ಜೂನ್ 2024, 15:21 IST
ದೇವರಹಿಪ್ಪರಗಿ ಪಟ್ಟಣ ಸೇರಿದಂತೆ ತಾಲ್ಲೂಕಿನಾದ್ಯಂತ ಮದ್ಯ ಅಕ್ರಮ ಮಾರಾಟ, ಮಾವಾ ಮಾರಾಟ ನಿಷೇಧಿಸುವಂತೆ ಆಗ್ರಹಿಸಿ ಮಹಿಳೆಯರು ತಹಶೀಲ್ದಾರ್‌ ಪ್ರಕಾಶ ಸಿಂದಗಿ ಅವರಿಗೆ ಮನವಿ ಸಲ್ಲಿಸಿದರು
ದೇವರಹಿಪ್ಪರಗಿ ಪಟ್ಟಣ ಸೇರಿದಂತೆ ತಾಲ್ಲೂಕಿನಾದ್ಯಂತ ಮದ್ಯ ಅಕ್ರಮ ಮಾರಾಟ, ಮಾವಾ ಮಾರಾಟ ನಿಷೇಧಿಸುವಂತೆ ಆಗ್ರಹಿಸಿ ಮಹಿಳೆಯರು ತಹಶೀಲ್ದಾರ್‌ ಪ್ರಕಾಶ ಸಿಂದಗಿ ಅವರಿಗೆ ಮನವಿ ಸಲ್ಲಿಸಿದರು   

ದೇವರಹಿಪ್ಪರಗಿ: ಪಟ್ಟಣ, ದೇವೂರ ಗ್ರಾಮ ಸೇರಿದಂತೆ ತಾಲ್ಲೂಕಿನಾದ್ಯಂತ ಅವ್ಯಾಹತವಾಗಿ ನಡೆಯುತ್ತಿರುವ ಮದ್ಯ ಅಕ್ರಮ  ಮಾರಾಟ ಹಾಗೂ ಪಾನ್‌ ಶಾಪ್‌ಗಳಲ್ಲಿ ಗಾಂಜಾ ಮಿಶ್ರಿತ ಮಾವಾ ಎಂಬ ಮಾದಕ ಪದಾರ್ಥ ಮಾರಾಟ ತಡೆಯಬೇಕೆಂದು ಮಹಿಳೆಯರು ಆಗ್ರಹಿಸಿದರು.  

ಪಟ್ಟಣದ ತಹಶೀಲ್ದಾರ್‌ ಕಚೇರಿಗೆ ಸೋಮವಾರ ದೇವೂರ ಹಾಗೂ ವಿವಿಧ ಗ್ರಾಮಗಳ ಮಹಿಳೆಯರು ಆಗಮಿಸಿ, ತಹಶೀಲ್ದಾರ್‌ ಪ್ರಕಾಶ ಸಿಂದಗಿ ಅವರಿಗೆ ಮನವಿ ಸಲ್ಲಿಸಿದರು.

ರೇಣುಕಾ ಪಾಟೀಲ ಮಾತನಾಡಿ, ಪಟ್ಟಣದ ಹಲವು ಅಂಗಡಿ ಹಾಗೂ ದೇವೂರ ಗ್ರಾಮದ ವಿವಿಧೆಡೆ ಮದ್ಯ ಅಕ್ರಮ ಮಾರಾಟ ಹಾಗೂ ಪಾನ್‌ ಶಾಪ್‌ಗಳಲ್ಲಿ ಗಾಂಜಾ ಮಿಶ್ರಿತ ಮಾವಾ ಮಾರಾಟ ಮಾಡುತ್ತಿದ್ದು, ಸ್ಥಳೀಯ ಯುವಕರು ಹಾಗೂ ಗಂಡಸರು ದುಶ್ಚಟಕ್ಕೆ ದಾಸರಾಗಿದ್ದಾರೆ. ಇದರಿಂದ ಮಹಿಳೆಯರು ವಿಚಲಿತರಾಗಿದ್ದಾರೆ. ಕೂಡಲೇ ತಾಲ್ಲೂಕು ಆಡಳಿತ ಕ್ರಮ ವಹಿಸಬೇಕು. ಇಲ್ಲವಾದರೆ ನಾವೆಲ್ಲ ಸಾಮೂಹಿಕವಾಗಿ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ ಎಂದು ಎಚ್ಚರಿಸಿದರು.

ADVERTISEMENT

ಶೋಭಾ ಬಿರಾದಾರ, ಸುಂದ್ರವ್ವಾ ಪಾಟೀಲ, ಮಾದೇವಿ ಪಾಟೀಲ, ಮಂಜುಳಾ ಬಿರಾದಾರ, ಶಾಂತಾಬಾಯಿ ಮೆಟಗಾರ, ಮಹಾದೇವಿ ಗೋಡ್ಯಾಳ, ಪಾರ್ವತಿ ಪಾಟೀಲ, ಅನಸೂಬಾಯಿ ಮಾದರ, ಗಿರೆವ್ವ ಮಾದರ, ಮಹಾದೇವಿ ಮಾದರ, ಇತರರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.