ವಿಜಯಪುರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯ್ತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಡಾ. ಬಿದರಿಯವರ ಅಶ್ವಿನಿ ಆಸ್ಪತ್ರೆ ಹಾಗೂ ಅಶ್ವಿನಿ ಇನ್‌ಸ್ಟಿಟ್ಯೂಟ್ ಆಫ್ ನರ್ಸಿಂಗ್ ಸೈನ್ಸ್ ಸಹಯೋಗದಲ್ಲಿ ಸೆ.30 ರಂದು ಬೆಳಿಗ್ಗೆ 8.30 ಕ್ಕೆ ‘ವಿಶ್ವ ಹೃದಯ ದಿನಾಚರಣೆ’ ಅಂಗವಾಗಿ ನಗರದ ಸಿದ್ಧೇಶ್ವರ ದೇವಸ್ಥಾನದಿಂದ ಬೃಹತ್ ಜಾಥಾ ಆಯೋಜಿಸಲಾಗಿದೆ.
ಜಿಲ್ಲಾಧಿಕಾರಿ ಟಿ. ಭೂಬಾಲನ್, ಜಿಲ್ಲಾ ಪಂಚಾಯ್ತಿ ಸಿ.ಇ.ಒ ರಾಹುಲ್ ಶಿಂಧೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಬಸವರಾಜ ಹುಬ್ಬಳ್ಳಿ ಮತ್ತು ಅಶ್ವಿನಿ ಆಸ್ಪತ್ರೆಯ ಮುಖ್ಯಸ್ಥ ಡಾ. ಎಲ್.ಎಚ್.ಬಿದರಿ ಹಸಿರು ನಿಶಾನೆ ತೋರಿಸುವ ಮೂಲಕ ಜಾಥಾಗೆ ಚಾಲನೆ ನೀಡಲಿದ್ದಾರೆ.
ಡಿ.ಎಚ್.ಒ ಕಚೇರಿ ಸಭಾಂಗಣದಲ್ಲಿ ಯುವಕರಲ್ಲಿ ಹೃದಯಾಘಾತ ಮತ್ತು ತಡೆಗಟ್ಟುವಿಕೆ ಕುರಿತು ಅಶ್ವಿನಿ ಆಸ್ಪತ್ರೆಯ ಹೃದಯರೋಗ ತಜ್ಞ ಡಾ.ಗೋಪಾಲಕೃಷ್ಣ ದೇಶಪಾಂಡೆ ವಿಶೇಷ ಉಪನ್ಯಾಸ ನೀಡಲಿದ್ದಾರೆ.
ನಗರದ ಶಿವಾಜಿ ಸರ್ಕಲ್ ಹತ್ತಿರದ ಡಿ.ಎಚ್.ಒ ಕಚೇರಿ ಆವರಣದಲ್ಲಿರುವ ಭಾರತೀಯ ರೆಡ್ ಕ್ರಾಸ್ ಬ್ಲಡ್ ಬ್ಯಾಂಕಿನಲ್ಲಿ ಉಚಿತ ಹೃದಯರೋಗ ತಪಾಸಣೆ ಮತ್ತು ರಕ್ತದಾನ ಶಿಬಿರವನ್ನೂ ಹಮ್ಮಿಕೊಳ್ಳಲಾಗಿದೆ ಎಂದು ಡಾ.ಕವಿತಾ ದೊಡ್ಡಮನಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.