ನಾರಾಯಣಪುರ: ಇಲ್ಲಿನ ಬಸವಸಾಗರ ಜಲಾಶಯದ 30 ಕ್ರಸ್ಟ್‌ಗೇಟ್‌ಗಳಿಂದ 1.78 ಲಕ್ಷ ಕ್ಯುಸೆಕ್ ನೀರುಕೃಷ್ಣಾ ನದಿಗೆ ಹರಿಬಿಡಲಾಗಿದೆ. ಪಶ್ಚಿಮಘಟ್ಟ ಜಲಾನಯನ ಪ್ರದೇಶದಲ್ಲಿ ನಿರಂತರ ಮಳೆ ಆಗುತ್ತಿರುವುದರಿಂದ ಬಸವಸಾಗರ ಜಲಾಶಯಕ್ಕೆ ನಿರಂತರವಾಗಿ ನೀರು ಹರಿದು ಬರುತ್ತಿದ್ದು, ಒಳಹರಿವನ್ನು ಗಮನಿಸಿ ಕೃಷ್ಣಾನದಿಗೆ ನೀರು ಹರಿಸಲಾಗುತ್ತಿದೆ.
ಆಲಮಟ್ಟಿಯ ಲಾಲ್ ಬಹುದ್ದೂರ ಶಾಸ್ತ್ರಿ ಜಲಾಶಯದಿಂದ ಬಸವಸಾಗರ ಜಲಾಶಯಕ್ಕೆ 1.85 ಲಕ್ಷ ಕ್ಯುಸೆಕ್ ನೀರು ಬಿಡಲಾಗುತ್ತಿದೆ. ನಾರಾಯಣಪುರ ಜಲಾಶಯದ 30 ಕ್ರಸ್ಟ್‌ಗೇಟ್‌ಗಳಿಂದ 1.78 ಲಕ್ಷ ಕ್ಯುಸೆಕ್ ನೀರನ್ನು ನದಿಗೆ ಹರಿಬಿಡಲಾಗುತ್ತಿದೆ’ ಎಂದು ಕೆಬಿಜೆಎನ್ಎಲ್ ಅಧಿಕಾರಿಗಳು ತಿಳಿಸಿದ್ದಾರೆ.
ಗರಿಷ್ಠ ಮಟ್ಟದಲ್ಲಿ 490.97 ಮೀಟರ್ ಎತ್ತರದವರೆಗೆ 27.727 ಟಿಎಂಸಿ ಅಡಿಗಳಷ್ಟು ನೀರು ಸಂಗ್ರಹಗೊಂಡಿದೆ ಎಂದು ತಿಳಿದು ಬಂದಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.