ADVERTISEMENT

ಬಸವಸಾಗರ ಜಲಾಶಯದಿಂದ ಕೃಷ್ಣಾ ನದಿಗೆ 1.78 ಲಕ್ಷ ಕ್ಯುಸೆಕ್ ನೀರು ಬಿಡುಗಡೆ

​ಪ್ರಜಾವಾಣಿ ವಾರ್ತೆ
Published 28 ಆಗಸ್ಟ್ 2024, 13:28 IST
Last Updated 28 ಆಗಸ್ಟ್ 2024, 13:28 IST
ನಾರಾಯಣಪುರ ಬಸವಸಾಗರ ಜಲಾಶಯದ 30 ಕ್ರಸ್ಟ್‌ಗೇಟ್‌ಗಳಿಂದ ಧುಮ್ಮಿಕ್ಕುವ ಜಲಧಾರೆಯ ಆಕರ್ಷಕ ನೋಟ
ನಾರಾಯಣಪುರ ಬಸವಸಾಗರ ಜಲಾಶಯದ 30 ಕ್ರಸ್ಟ್‌ಗೇಟ್‌ಗಳಿಂದ ಧುಮ್ಮಿಕ್ಕುವ ಜಲಧಾರೆಯ ಆಕರ್ಷಕ ನೋಟ   

ನಾರಾಯಣಪುರ: ಬುಧವಾರ ಬಸವಸಾಗರ ಜಲಾಶಯದ 30 ಕ್ರಸ್ಟ್‌ಗೇಟ್‌ಗಳನ್ನು ತೆರೆದು 1.78 ಲಕ್ಷ ಕ್ಯುಸೆಕ್ ನೀರನ್ನು ಕೃಷ್ಣಾ ನದಿ ಹರಿಬಿಡಲಾಗುತ್ತಿದೆ.

ಬುಧವಾರ ಆಲಮಟ್ಟಿ ಜಲಾಶಯದಿಂದ 1.75 ಲಕ್ಷ ಕ್ಯುಸೆಕ್ ನೀರಿನ ಒಳಹರಿವು ಮುಂದುವರಿದಿದೆ. ಜಲಾಶಯಕ್ಕೆ ಬರುವ ಒಳಹರಿವು ಗಮನಿಸಿ ಕೃಷ್ಣಾ ನದಿಗೆ ನೀರು ಹರಿಬಿಡಲಾಗುತ್ತಿದೆ. ಒಳಹರಿವು ತಗ್ಗಿದರೆ ಹೊರ ಹರಿವು ಕಡಿಮೆಗೊಳಿಸಲಾಗುತ್ತಿದೆ ಎಂದು ಕೆಬಿಜೆಎನ್ಎಲ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಅಧಿಕಾರಿಗಳ ಮಾಹಿತಿಯಂತೆ ಗರಿಷ್ಠ 492.25 ಮೀಟರ್‌ ಎತ್ತರದಲ್ಲಿ 33.313 ಟಿಎಂಸಿ ಅಡಿ ಸಂಗ್ರಹ ಸಾಮರ್ಥ್ಯದ ಜಲಾಶಯದಲ್ಲಿ 491.11 ಮೀಟರ್‌ಗೆ ನೀರು ಬಂದು ತಲುಪಿದ್ದು, 28.28 ಟಿಎಂಸಿ ಅಡಿಗಳಷ್ಟು ನೀರು ಸಂಗ್ರಹಗೊಂಡಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.