ADVERTISEMENT

ಕೃಷ್ಣಾ ನದಿಗೆ 95 ಸಾವಿರ ಕ್ಯುಸೆಕ್ ನೀರು ಬಿಡುಗಡೆ

​ಪ್ರಜಾವಾಣಿ ವಾರ್ತೆ
Published 6 ಸೆಪ್ಟೆಂಬರ್ 2024, 14:02 IST
Last Updated 6 ಸೆಪ್ಟೆಂಬರ್ 2024, 14:02 IST
ಚಿತ್ರ06ಎನ್ಆರ್ಪಿ04ನಾರಾಯಣಪುರ ಬಸವಸಾಗರ ಜಲಾಶಯದ 25 ಕ್ರಸ್ಟ್ಗೇಟ್ಗಳಿಂದ 95 ಸಾವಿರ ಕ್ಯುಸೆಕ್ ನೀರನ್ನು ಕೃಷ್ಣಾ ನದಿಗೆ ಹರಿಬಿಡಲಾಗುತ್ತಿದೆ. 
ಚಿತ್ರ06ಎನ್ಆರ್ಪಿ04ನಾರಾಯಣಪುರ ಬಸವಸಾಗರ ಜಲಾಶಯದ 25 ಕ್ರಸ್ಟ್ಗೇಟ್ಗಳಿಂದ 95 ಸಾವಿರ ಕ್ಯುಸೆಕ್ ನೀರನ್ನು ಕೃಷ್ಣಾ ನದಿಗೆ ಹರಿಬಿಡಲಾಗುತ್ತಿದೆ.    

ನಾರಾಯಣಪುರ: ಒಳಹರಿವು ಹೆಚ್ಚಾದ ಪರಿಣಾಮ ಬಸವಸಾಗರ ಜಲಾಶಯದ 25 ಗೇಟ್‌ ಹಾಗೂ ಖಾಸಗಿ ಎಂಪಿಸಿಎಲ್ ಜಲವಿದ್ಯುತ್ ಸ್ಥಾವರದ ಮೂಲಕ ಒಟ್ಟು 95 ಸಾವಿರ ಕ್ಯುಸೆಕ್‌ ನೀರನ್ನು ಕೃಷ್ಣಾ ನದಿಗೆ ಹರಿಬಿಡಲಾಗುತ್ತಿದೆ.

ಬಸವಸಾಗರಕ್ಕೆ ಆಲಮಟ್ಟಿ ಜಲಾಶಯದಿಂದ 85 ಸಾವಿರ ಕ್ಯುಸೆಕ್ ನೀರನ್ನು ಶುಕ್ರವಾರ ಬಿಡುಗಡೆ ಮಾಡಲಾಗುತ್ತಿದ್ದು, ಬಸವ ಸಾಗರ ಜಲಾಶಯದಿಂದ 95 ಸಾವಿರ ಕ್ಯುಸೆಕ್ ನೀರನ್ನು ನದಿಗೆ ಹರಿಬಿಡಲಾಗುತ್ತಿದೆ ಎಂದು ಕೆಬಿಜೆಎನ್ಎಲ್ ಅಧಿಕಾರಿಗಳು ತಿಳಿಸಿದ್ದಾರೆ.

ಅಚ್ಚುಕಟ್ಟು ಪ್ರದೇಶ, ಮಹಾರಾಷ್ಟ್ರದಲ್ಲಿ ಮಳೆ ಸುರಿಯುತ್ತಿದ್ದು, ಮಳೆ ಪ್ರಮಾಣ ತಗ್ಗಿದರೆ ಒಳಹರಿವು ಕಡಿಮೆಯಾಗುತ್ತದೆ ಎಂದು ಅಧಿಕಾರಿಗಳು ವಿವರಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.