ADVERTISEMENT

ಫಲಿತಾಂಶ ಹೆಚ್ಚಳಕ್ಕೆ ಕಾರ್ಯಾಗಾರ ಪೂರಕ

​ಪ್ರಜಾವಾಣಿ ವಾರ್ತೆ
Published 6 ಜನವರಿ 2024, 15:59 IST
Last Updated 6 ಜನವರಿ 2024, 15:59 IST
ಶಹಾಪುರ ತಾಲ್ಲೂಕಿನ ಭೀಮರಾಯನಗುಡಿ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಕಾರ್ಯಾಗಾರಕ್ಕೆ ಉಪನ್ಯಾಸಕರು ಚಾಲನೆ ನೀಡಿದರು
ಶಹಾಪುರ ತಾಲ್ಲೂಕಿನ ಭೀಮರಾಯನಗುಡಿ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಕಾರ್ಯಾಗಾರಕ್ಕೆ ಉಪನ್ಯಾಸಕರು ಚಾಲನೆ ನೀಡಿದರು   

ಶಹಾಪುರ: ‘ದ್ವಿತೀಯ ಪಿಯುಸಿಯು ವಿದ್ಯಾರ್ಥಿ ಜೀವನದಲ್ಲಿ ಬದಲಾವಣೆಯ ಮುಖ್ಯ ಘಟ್ಟವಾಗಿದೆ. ವಿದ್ಯಾರ್ಥಿಗಳು ಶ್ರದ್ಧೆಯಿಂದ ಅಧ್ಯಯನ ಮಾಡಬೇಕು. ಉತ್ತಮ ಸಾಧನೆ ಜೀವನದ ದಿಕ್ಕು ಬದಲಾಯಿಸಬಲ್ಲದು’ ಎಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಧ್ಯಾಪಕ ಹೈಯಾಳಪ್ಪ ಹೈಯಾಳಕರ್ ತಿಳಿಸಿದರು.

ತಾಲ್ಲೂಕಿನ ಭೀಮರಾಯನಗುಡಿ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗಾಗಿ ನಡೆದ ಫಲಿತಾಂಶ ಹೆಚ್ಚಳ ಕಾರ್ಯಾಗಾರದಲ್ಲಿ ಮಾತನಾಡಿ,‘ಫಲಿತಾಂಶ ಹೆಚ್ಚಳಕ್ಕೆ ಕಾರ್ಯಾಗಾರ ಪೂರಕ’ ಎಂದು ಹೇಳಿದರು.

ತಾಲ್ಲೂಕಿನ ವಿವಿಧ ಸರ್ಕಾರಿ ಪದವಿ ಪೂರ್ವ ಹಾಗೂ ಅನುದಾನಿತ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯರು ಹಾಗೂ ಉಪನ್ಯಾಸಕರು ಭಾಗವಹಿಸಿದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.