ADVERTISEMENT

26ರಂದು ಸಂವಿಧಾನ ಸಮರ್ಪಣಾ ದಿನ ಆಚರಣೆ

​ಪ್ರಜಾವಾಣಿ ವಾರ್ತೆ
Published 22 ನವೆಂಬರ್ 2024, 16:21 IST
Last Updated 22 ನವೆಂಬರ್ 2024, 16:21 IST
ಯರಗೋಳದಲ್ಲಿ ಹಮ್ಮಿಕೊಂಡಿರುವ ಸಂವಿಧಾನ ಸಮರ್ಪಣಾ ದಿನಾಚರಣೆ ಹಾಗೂ ಸಂವಿಧಾನದ ಉಳಿವಿಗಾಗಿ ಜನಜಾಗೃತಿ ಸಮಾವೇಶದ ಭಿತ್ತಿಪತ್ರವನ್ನು  ಶಾಸಕ ಶರಣಗೌಡ ಕಂದಕೂರ ಬಿಡುಗಡೆ ಮಾಡಿದರು. ಅಂಬೇಡ್ಕರ್ ಸೇನೆ ಜಿಲ್ಲಾ ಘಟಕದ ಅಧ್ಯಕ್ಷ ಭೀಮಾಶಂಕರ ಎಂ ಯರಗೋಳ, ಮಾರ್ಥಂಡಪ್ಪ ಮಾನೇಗಾರ ಹಾಜರಿದ್ದರು

ಯರಗೋಳ: ಅಂಬೇಡ್ಕರ್ ಸೇನೆ ಜಿಲ್ಲಾ ಘಟಕದ ವತಿಯಿಂದ ಯರಗೋಳ ಗ್ರಾಮದಲ್ಲಿ ನವೆಂಬರ್‌ 26ರಂದು ಸಂವಿಧಾನ ಸಮರ್ಪಣಾ ದಿನಾಚರಣೆ ಹಾಗೂ ಸಂವಿಧಾನದ ಉಳಿವಿಗಾಗಿ ಜನಜಾಗೃತಿ ಸಮಾವೇಶ ಹಮ್ಮಿಕೊಳ್ಳಲಾಗಿದೆ.

ಅಂದು ಬೆಳಿಗ್ಗೆ 9 ಗಂಟೆಗೆ ಅಂಬೇಡ್ಕರ್ ಭವನದಿಂದ ಆರಂಭವಾಗಲಿರುವ ಮೆರವಣಿಗೆಯು ವಿವಿಧ ಕಲಾತಂಡಗಳೊಂದಿಗೆ ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮೂಲಕ ತೆರಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ತಲುಪಲಿದೆ. ಬೆಳಿಗ್ಗೆ 11ಗಂಟೆ  ಬಹಿರಂಗ ಸಭೆ, ಶಾಲಾ ಮಕ್ಕಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿವೆ. ಸಮಾರಂಭದಲ್ಲಿ ಅಂಬೇಡ್ಕರ್ ಸೇನೆಯ ರಾಜ್ಯ ಘಟಕದ ಅಧ್ಯಕ್ಷ ಪಿ ಮೂರ್ತಿ, ಮೈಸೂರಿನ ಉರಿಲಿಂಗಿಪೆದ್ದಿ ಮಠದ ಜ್ಞಾನ ಪ್ರಕಾಶ ಸ್ವಾಮೀಜಿ, ಗುರುಮಠಕಲ್‌ ಖಾಸಾಮಠದ ಶಾಂತವೀರ ಮುರುಘರಾಜೇಂದ್ರ ಸ್ವಾಮೀಜಿ,  ಯರಗೋಳದ ಗವಿ ಸಿದ್ದಲಿಂಗೇಶ್ವರ ಮಠದ ಸಂಗಮೇಶ್ವರ ದೇವರು ಭಾಗವಹಿಸುವರು ಎಂದು ಪ್ರಕಟಣೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT