ಸುರಪುರ: ‘ಈ ಭಾಗದ ಶೈಕ್ಷಣಿಕ ಪ್ರಗತಿ ಸಾಧಿಸಲು ನಮ್ಮ ಸರ್ಕಾರ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದೆ. ಕೆಕೆಆರ್‌ಡಿಬಿಯ ಅಕ್ಷರ ಆವಿಷ್ಕಾರ ಯೋಜನೆ ಅಡಿಯಲ್ಲಿ ಶಿಕ್ಷಣಕ್ಕೆ ಅಗತ್ಯವಿರುವ ಸೌಕರ್ಯ ಒದಗಿಸುವ ನಿಟ್ಟಿನಲ್ಲಿ ಕ್ರಮ ವಹಿಸಲಾಗಿದೆ’ ಎಂದು ಶಾಸಕ ರಾಜಾ ವೇಣುಗೋಪಾಲ ನಾಯಕ ಹೇಳಿದರು.
ಸಮೀಪದ ರಂಗಂಪೇಟೆಯಲ್ಲಿ ಶುಕ್ರವಾರ ಅಲ್ಪಸಂಖ್ಯಾತರ ಮುರಾರ್ಜಿ ದೇಸಾಯಿ ವಸತಿ ಶಾಲೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.
‘ನಮ್ಮ ತಂದೆ ಶಾಸಕರಾಗಿದ್ದ ದಿವಂಗತ ರಾಜಾ ವೆಂಕಟಪ್ಪ ನಾಯಕ ಅವರು ಕ್ಷೇತ್ರದ ಶೈಕ್ಷಣಿಕ ಪ್ರಗತಿಗೆ ಹೆಚ್ಚು ಒತ್ತು ನೀಡಿದ್ದರು. ಅದರಂತೆ ನಾನು ಸಹ ಶಿಕ್ಷಣ, ಆರೋಗ್ಯ ಸೇರಿದಂತೆ ಮೂಲಸೌಕರ್ಯ ಒದಗಿಸುವ ನಿಟ್ಟಿನಲ್ಲಿ ಕೆಲಸ ಮಾಡುವೆ’ ಎಂದರು.
‘ಶೈಕ್ಷಣಿಕವಾಗಿ ಹಿಂದುಳಿದ ಪ್ರದೇಶವೆಂಬ ಹಣೆ ಪಟ್ಟಿಯನ್ನು ಹೋಗಲಾಡಿಸುವ ನಿಟ್ಟಿನಲ್ಲಿ ಪ್ರಯತ್ನಿಸಲಾಗುತ್ತಿದೆ. ಅದರಂತೆ ಕ್ಷೇತ್ರದಲ್ಲಿ ಹೊಸದಾಗಿ ಅಲ್ಪಸಂಖ್ಯಾತರ ಮುರಾರ್ಜಿ ದೇಸಾಯಿ ವಸತಿ ಶಾಲೆಯನ್ನು ಪ್ರಾರಂಭಿಸಲಾಗಿದ್ದು ಇದರ ಸದುಪಯೋಗವನ್ನು ವಿದ್ಯಾರ್ಥಿಗಳು ಪಡೆದುಕೊಳ್ಳುವಂತೆ’ ತಿಳಿಸಿದರು.
ಕೆಪಿಸಿಸಿ ರಾಜ್ಯ ಸಮಿತಿ ಪ್ರಧಾನ ಕಾರ್ಯದರ್ಶಿ ವಿಠ್ಠಲ ಯಾದವ, ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಪ್ರಕಾಶ ಗುತ್ತೇದಾರ, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ರಾಜಾ ಕುಮಾರನಾಯಕ, ನಗರಸಭೆ ಉಪಾಧ್ಯಕ್ಷ ರಾಜಾ ಪಿಡ್ಡನಾಯಕ, ಮುಖಂಡರಾದ ಮಹಿಬೂಬ ಒಂಟಿ, ಅಬ್ದುಲ್ ಗಫಾರ್ ನಗನೂರಿ, ಶಕೀಲ ಅಹ್ಮದ್, ಧರ್ಮರಾಜ, ನಗರಸಭೆ ಸದಸ್ಯರಾದ ನಾಸೀರ್ ಕುಂಡಾಲೆ, ಖಮರುಲ್ ನಾರಾಯಣಪೇಟ, ಮಹ್ಮದ್ ಗೌಸ್, ರಮೇಶ ದೊರೆ ಆಲ್ದಾಳ, ಪರಮಣ್ಣ ಪೂಜಾರಿ, ಖಾಲೀದ ಅಹ್ಮದ್ ತಾಳಿಕೋಟೆ, ಕನಕಚಲನಾಯಕ ಯಡಿಯಾಪುರ, ಶರೀಫ್, ಯಲ್ಲಪ್ಪ ಗುಡ್ಡಕಾಯಿ, ಸಿದ್ರಾಮ ಎಲಿಗಾರ, ಅಲ್ಪ ಸಂಖ್ಯಾತರ ಜಿಲ್ಲಾ ಕಲ್ಯಾಣಾಧಿಕಾರಿ ಭಾಗ್ಯಶ್ರೀ ಕಂಬಾರ, ಅಲ್ಪ ಸಂಖ್ಯಾತರ ತಾಲ್ಲೂಕು ಕಲ್ಯಾಣಾಧಿಕಾರಿ ಜ್ಞಾನಪ್ಪ ಮೇಟಿ ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.