ಕೆಂಭಾವಿ: ಪಟ್ಟಣದ ಆಶ್ರಯ ಕಾಲೊನಿಯಲ್ಲಿರುವ ಚೆನ್ನಬಸವೇಶ್ವರ ದೇವಸ್ಥಾನದ ವತಿಯಿಂದ ನವೆಂಬರ್ 9ರಂದು ಜೀರ್ಣೋದ್ಧಾರ ಹಾಗೂ ಭಜನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ದೇವಸ್ಥಾನ ಸಮಿತಿ ಮುಖ್ಯಸ್ಥ ರಾಮು ಯಾಳಗಿ ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ‘ನಗನೂರ ಗ್ರಾಮದ ಭಜನಾ ಮಂಡಳಿ ಹಾಗೂ ಆಲಮೇಲ ತಾಲ್ಲೂಕು ಬೊಮ್ಮನಹಳ್ಳಿ ಗ್ರಾಮದ ಬಲಭೀಮೇಶ್ವರ ಭಜನಾ ಮಂಡಳಿಗಳಿಂದ ಅಹೋ ರಾತ್ರಿ ಭಜನೆ ನಡೆಯಲಿದ್ದು, ಭಾನುವಾರ ಪಟ್ಟಣ ಸೇರಿದಂತೆ ಸುತ್ತಲಿನ ಗ್ರಾಮದವರಿಗೆ ಪ್ರಸಾದ ವ್ಯವಸ್ಥೆ ಕಲ್ಪಿಸಲಾಗಿದೆ’ ಎಂದು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.