ADVERTISEMENT

‘ಮಕ್ಕಳ ಕಲಿಕೆಯಲ್ಲಿ ಆಸಕ್ತಿ ಮೂಡಿಸಿ’

​ಪ್ರಜಾವಾಣಿ ವಾರ್ತೆ
Published 3 ಜುಲೈ 2024, 14:32 IST
Last Updated 3 ಜುಲೈ 2024, 14:32 IST
ಹುಣಸಗಿ ತಾಲ್ಲೂಕಿನ ವಜ್ಜಲ ಗ್ರಾಮದ ಆದರ್ಶ ಶಾಲೆಯಲ್ಲಿ ತಾಲ್ಲೂಕಿನ ವಿಜ್ಞಾನ ಶಿಕ್ಷಕರಿಗೆ ತರಬೇತಿ ಕಾರ್ಯಕ್ರಮವನ್ನು ನಡೆಯಿತು
ಹುಣಸಗಿ ತಾಲ್ಲೂಕಿನ ವಜ್ಜಲ ಗ್ರಾಮದ ಆದರ್ಶ ಶಾಲೆಯಲ್ಲಿ ತಾಲ್ಲೂಕಿನ ವಿಜ್ಞಾನ ಶಿಕ್ಷಕರಿಗೆ ತರಬೇತಿ ಕಾರ್ಯಕ್ರಮವನ್ನು ನಡೆಯಿತು   

ಹುಣಸಗಿ: ಮುಂಬರುವ ಎಸ್‌ಎಸ್ಎಲ್‌ಸಿ ಪರಿಕ್ಷೆಗೆ ಮಕ್ಕಳನ್ನು ತಯಾರು ಮಾಡುವ ನಿಟ್ಟಿನಲ್ಲಿ ಈಗಿನಿಂದಲೇ ಎಲ್ಲ ಶಿಕ್ಷಕರು ಗುಣಾತ್ಮಕ ಬೊಧನೆಗೆ ಆದ್ಯತೆ ನೀಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಯಲ್ಲಪ್ಪ ಕಾಡ್ಲೂರ ಹೇಳಿದರು.

ಹುಣಸಗಿ ತಾಲ್ಲೂಕಿನ ವಜ್ಜಲ ಗ್ರಾಮದ ಆದರ್ಶ ಶಾಲೆಯಲ್ಲಿ ಹಮ್ಮಿಕೊಂಡಿದ್ದ ವಿಜ್ಞಾನ ಶಿಕ್ಷಕರಿಗೆ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಆಯಾ ಶಾಲೆಗಳಲ್ಲಿ ಲಭ್ಯವಿರುವ ವಸ್ತುಗಳನ್ನೇ ಬಳಕೆ ಮಾಡಿಕೊಂಡು ಮಕ್ಕಳಿಗೆ ಪ್ರಯೋಗಗಳ ಮೂಲಕ ಬೋಧನೆ ಮಾಡಿದಾಗ ಮನಮುಟ್ಟಲು ಸಾಧ್ಯವಾಗುತ್ತದೆ. ಈ ನಿಟ್ಟಿನಲ್ಲಿ ಹುಣಸಗಿ ಹಾಗೂ ಸುರಪುರ ತಾಲ್ಲೂಕಿನಲ್ಲಿನ ವಿಜ್ಞಾನ ಶಿಕ್ಷಕರಿಗೆ ಈ ತರಬೇತಿ ಹೆಚ್ಚು ಸಹಕಾರಿಯಾಗಿದೆ ಎಂದರು.

ADVERTISEMENT

ಅಧ್ಯಕ್ಷತೆ ವಹಿಸಿದ್ದ ಶಾಲೆಯ ಮುಖ್ಯಶಿಕ್ಷಕ ಎಸ್.ಎಸ್.ಬಾಕಲಿ ಮಾತನಾಡಿ, ನಮ್ಮಲ್ಲಿನ ಮಕ್ಕಳ ಶೈಕ್ಷಣಿಕ ಗುಣಮಟ್ಟ ಚನ್ನಾಗಿದೆ. ಆದರೆ, ನುರಿತ ಶಿಕ್ಷಕರಿಂದ ಬೊಧನೆ ಮಾಡಿದಾಗ ಎಲ್ಲ ವಿಷಯವೂ ಸರಳವಾಗುತ್ತದೆ ಎಂದರು.

ಸಂಪನ್ಮೂಲ ವ್ಯಕ್ತಿಗಳಾಗಿ ಯಲಗೂರೇಶ ಕುಲಕರ್ಣಿ, ದತ್ತಾತ್ರೇಯ ಕುಲಕರ್ಣಿ, ರಘು .ಡಿ, ಶಿವಕುಮಾರ ಹಿರೇಮಠ, ಸಾಹೇಬಗೌಡ ಉಕ್ಕಲಿ ಭಾಗವಹಿಸಿ ವಿಜ್ಞಾನ ವಿಷಯದ ಕುರಿತು ತರಬೇತಿ ನೀಡಿದರು.

ಮುಖ್ಯ ಅತಿಥಿಗಳಾಗಿ ಬಿಆರ್.ಪಿ ಖಾದರ್ ಪಟೇಲ, ಅಗಸ್ತ್ಯ ಫೌಂಡೇಶಷನ್‌ನ ಸಾಬಣ್ಣ ಬಸ್ಕಿ, ಆಕಾಶ, ಸಿಆರ್.ಪಿ ಬಸವರಾಜ ದಳವಾಯಿ, ಅಗಸ್ತ್ಯ ಪೌಂಡೇಶನ್‌ನ ಯಮನೂರಪ್ಪ ಸೇರಿದಂತೆ ತಾಲ್ಲೂಕಿನ 46 ಶಾಲೆಗಳ ಶಿಕ್ಷಕರು ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.