ADVERTISEMENT

₹12.71 ಕೋಟಿ ವೆಚ್ಚದ ಕಾಮಗಾರಿಗಳಿಗೆ ಚಾಲನೆ

​ಪ್ರಜಾವಾಣಿ ವಾರ್ತೆ
Published 10 ಜುಲೈ 2024, 16:22 IST
Last Updated 10 ಜುಲೈ 2024, 16:22 IST
ಶಹಾಪುರ ತಾಲ್ಲೂಕಿನ ಸಗರ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದ ಕಟ್ಟಡ ಉದ್ಘಾಟನಾ ಸಮಾರಂಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪ ದರ್ಶನಾಪುರ ಮಾತನಾಡಿದರು. ಗ್ರಾಮದ ಗಣ್ಯರು ಉಪಸ್ಥಿತರಿದ್ದರು
ಶಹಾಪುರ ತಾಲ್ಲೂಕಿನ ಸಗರ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದ ಕಟ್ಟಡ ಉದ್ಘಾಟನಾ ಸಮಾರಂಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪ ದರ್ಶನಾಪುರ ಮಾತನಾಡಿದರು. ಗ್ರಾಮದ ಗಣ್ಯರು ಉಪಸ್ಥಿತರಿದ್ದರು   

ಶಹಾಪುರ: ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಕ್ಕೆ ಹೆಚ್ಚು ಗಮನ ನೀಡಿ ಉತ್ತಮ ಯೋಜನೆಗಳನ್ನು ಅನುಷ್ಠಾನಗೊಳಿಸಿದರೆ ಎಲ್ಲಾ ರೀತಿಯಲ್ಲೂ ಅಭಿವೃದ್ಧಿ ಸಾಧಿಸಲು ಸಾಧ್ಯ. ಯಾವುದೇ ಜನಪರ ಯೋಜನೆಗಳಿಗೆ ಸರ್ವರ ಸಹಕಾರ ಅಗತ್ಯ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪ ದರ್ಶನಾಪುರ ತಿಳಿಸಿದರು.

ತಾಲ್ಲೂಕಿನ ಸಗರ ಗ್ರಾಮದಲ್ಲಿ ಬುಧವಾರ ₹ 3.11ಕೋಟಿ ವೆಚ್ಚದ ಪ್ರಾಥಮಿಕ ಆರೋಗ್ಯ ಕೇಂದ್ರದ ಕಟ್ಟಡ ಉದ್ಘಾಟನೆ,₹9 ಕೋಟಿ ವೆಚ್ಚದಲ್ಲಿ ಅಲ್ಪಸಂಖ್ಯಾತರ ಹಾಸ್ಟೆಲ್ ಕಟ್ಟಡ ಉದ್ಘಾಟನೆ, ₹ 60 ಲಕ್ಷ ವೆಚ್ಚದ ಪ್ರಾಥಮಿಕ ಶಾಲೆಯ ಆರು ಕೋಣೆಗಳ ಉದ್ಘಾಟನೆಯನ್ನು ನೆರವೇರಿಸಿ ಅವರು ಮಾತನಾಡಿದರು.

ಬರುವ ದಿನಗಳಲ್ಲಿ ಆರೋಗ್ಯ ಕೇಂದ್ರಕ್ಕೆ ಕಾಂಪೌಂಡ್‌ ಹಾಗೂ ರಸ್ತೆ ನಿರ್ಮಿಸಲಾಗುವುದು. ಗ್ರಾಮದ ಸಮಗ್ರ ಅಭಿವೃದ್ದಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ಸರ್ಕಾರ ಕೆಕೆಆರ್‌ಡಿಬಿ ಅಡಿಯಲ್ಲಿ ₹ 5 ಸಾವಿರ ಕೋಟಿ ಅನುದಾನ ಮೀಸಲಿಟ್ಟಿದೆ. ಬಡತನ ಮತ್ತು ಬಡತನ ರೇಖೆಗಿಂತ ಕೆಳಗಿರುವ ಎಲ್ಲಾ ಕುಟುಂಬ ವರ್ಗದವರಿಗೂ ಎಲ್ಲಾ ರೀತಿಯ ಸರ್ಕಾರಿ ಸೌಲಭ್ಯ ಒದಗಿಸಲಾಗುತ್ತದೆ ಎಂದರು.

ADVERTISEMENT

ತಾಲ್ಲೂಕಿನ ಮುಡಬೂಳ ಸೇರಿದಂತೆ ಜಿಲ್ಲೆಯಲ್ಲಿ ಏಳು ಪ್ರಾಥಮಿಕ ಆರೋಗ್ಯ ಕೇಂದ್ರದ ಕಟ್ಟಡ ಕೆಲಸ ಆರಂಭವಾಗಲಿದೆ. ಒಂದು ಕೇಂದ್ರದ ಕಟ್ಟಡಕ್ಕೆ ₹5ಕೋಟಿ ವೆಚ್ಚವಾಗಲಿದೆ. ಅಲ್ಲದೇ ಕೆಕೆಆರ್‌ಡಿಬಿ ಅನುದಾನದಲ್ಲಿ ಕಲ್ಯಾಣ ಪಥ ಯೋಜನೆ ಅಡಿಯಲ್ಲಿ ರಸ್ತೆ ಅಭಿವೃದ್ಧಿ ಮಾಡಲಾಗುವುದು ಎಂದರು.

ಇದೇ ಸಂದರ್ಭದಲ್ಲಿ ಆರೋಗ್ಯ ಕೇಂದ್ರ ಕಟ್ಟಡ ನಿರ್ಮಾಣಕ್ಕೆ ಭೂದಾನ ಮಾಡಿದ ತಿರುಪತಿ ಹತ್ತಿಗಕಟಗಿ ಅವರನ್ನು ಗೌರವಿಸಲಾಯಿತು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿ ಡಾ.ಪ್ರಭುಲಿಂಗ ಮಾನಕರ್, ತಾಲ್ಲೂಕು ವೈದ್ಯಾಧಿಕಾರಿ ಡಾ.ರಮೇಶ ಗುತ್ತೇದಾರ, ಡಾ.ವಿವೇಕಾನಂದ ಎಚ್, ಗುತ್ತಿಗೆದಾರ ಶ್ರೀಕಾಂತ ಸುಬೇದಾರ, ಗ್ರಾ.ಪಂ ಅಧ್ಯಕ್ಷ ಸಂತೋಷ ಸುಬೇದಾರ, ಬಸನಗೌಡ ಪಾಟೀಲ, ನಾಗಣಗೌಡ ಸುಬೇದಾರ, ಚಂದಪ್ಪ, ಬಸವರಾಜ ಕನಗೊಂಡ, ಮಹಾಂತಗೌಡ ಸುಬೇದಾರ, ಪ್ರಕಾಶ ಪಡಶೆಟ್ಟಿ, ಮಾಣಿಕ ಕನಕಟ್ಟೆ, ಶಿವಕುಮಾರ, ಪ್ರವೀಣ, ಮಾನಪ್ಪ ವಠಾರ
ಭಾಗವಹಿಸಿದ್ದರು.

ಸಗರ ಗ್ರಾಮ ಪಂಚಾಯಿತಿಯನ್ನು ಪಟ್ಟಣ ಪಂಚಾಯಿತಿಯಾಗಿ ಮೇಲ್ದರ್ಗೇರಿಸಲಾಗುವುದು. ಮಹಿಳಾ ಪದವಿ ಕಾಲೇಜು ಸ್ಥಾಪನೆಗೆ ಪ್ರಾಮಾಣಿಕವಾಗಿ ಯತ್ನಿಸಲಾಗುವುದು.
ಶರಣಬಸಪ್ಪ ದರ್ಶನಾಪುರ ಜಿಲ್ಲಾ ಉಸ್ತುವಾರಿ ಸಚಿವ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.