ADVERTISEMENT

ದಿಶಾ, ಕೆಡಿಪಿಗೆ ಕೂಡಿ ಬಾರದ ಸಮಯ

ಜಿಲ್ಲೆಯ ಅಭಿವೃದ್ಧಿ ಕಾರ್ಯಗಳಿಗೆ ಚುರುಕು ನೀಡಬೇಕಾದ ಸಚಿವರು, ಸಂಸದರಿಗೆ ಪುರುಸೋತ್ತಿಲ್ಲ

ಬಿ.ಜಿ.ಪ್ರವೀಣಕುಮಾರ
Published 20 ಅಕ್ಟೋಬರ್ 2024, 6:06 IST
Last Updated 20 ಅಕ್ಟೋಬರ್ 2024, 6:06 IST

ಯಾದಗಿರಿ: ಕಳೆದ ಒಂದು ವರ್ಷದಿಂದ ಜಿಲ್ಲಾ ಅಭಿವೃದ್ಧಿ ಸಮನ್ವಯ ಹಾಗೂ ಮೇಲ್ವಿಚಾರಣಾ ಸಮಿತಿ (ದಿಶಾ), 9 ತಿಂಗಳಿಂದ ರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ತ್ರೈಮಾಸಿಕ (ಕೆಡಿಪಿ) ಪ್ರಗತಿ ಪರಿಶೀಲನೆ ಸಭೆಗೆ ಸಮಯ ಕೂಡಿ ಬಂದಿಲ್ಲ. ಇದರಿಂದ ಅಭಿವೃದ್ಧಿ ಕಾಮಗಾರಿಗಳು ನಿಂತ ನೀರಾಗಿವೆ ಎನ್ನುವುದು ಜಿಲ್ಲೆಯಲ್ಲಿ ಕೇಳಿ ಬರುತ್ತಿದೆ.

ಸರ್ಕಾರದ ನಿಯಮದಂತೆ ಪ್ರತಿ ಮೂರು ತಿಂಗಳಿಗೊಮ್ಮೆ ಸಭೆ ನಡೆಸಬೇಕು. ಆದರೆ, ಜಿಲ್ಲೆಯಲ್ಲಿ ಕಳೆದ 9 ತಿಂಗಳಿಂದ ಸಭೆಗೆ ಗ್ರಹಣ ಹಿಡಿದಿದೆ. ಮುಂಗಾರು ಹಂಗಾಮು ನಂತರ ಹಿಂಗಾರು ಹಂಗಾಮು ಆಗಮಿಸಿದ್ದು, ರೈತರಿಗೆ ಬೇಕಾಗಿರುವ ಅಗತ್ಯ ಕೃಷಿ ಸಾಮಗ್ರಿ, ಬಿತ್ತನೆ ಬೀಜ, ರಸಗೊಬ್ಬರ, ರಸ್ತೆ ದುರಸ್ತಿ, ಬೀದಿ ದೀಪ ನಿರ್ವಹಣೆ, ಶಿಕ್ಷಣ, ಕೃಷಿ, ತೋಟಗಾರಿಕೆ, ಆರೋಗ್ಯ, ಜೆಸ್ಕಾಂ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸುವ ಮೂಲಕ ಕಾಮಗಾರಿಗೆ ವೇಗ ನೀಡಬೇಕಾಗುತ್ತದೆ. ಆದರೆ, ಜಿಲ್ಲೆಯಲ್ಲಿ ಅಂಥ ಕೆಲಸಗಳು ಆಗುತ್ತಿಲ್ಲ ಎನ್ನುವ ಕೂಗು ಸ್ವತಂ ಕಾಂಗ್ರೆಸ್‌ ಪಕ್ಷದ ಕಾರ್ಯಕರ್ತರೇ ಆರೋಪಿಸುತ್ತಿದ್ದಾರೆ.

ಸಭೆ ನಡೆಸದ ಸಚಿವರು, ಸಂಸದರು:

ADVERTISEMENT

‌ಜಿಲ್ಲಾ ಉಸ್ತುವಾರಿ ಹಾಗೂ ಸಣ್ಣ ಕೈಗಾರಿಕೆ ಹಾಗೂ ಸಾರ್ವಜನಿಕ ಉದ್ದಿಮೆಗಳ ಖಾತೆ ಸಚಿವ ಶರಣಬಸಪ್ಪ ದರ್ಶನಾಪುರ ಅವರ ಅಧ್ಯಕ್ಷತೆಯಲ್ಲಿ ಕರ್ನಾಟಕ ಅಭಿವೃದ್ಧಿ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆ ನಡೆಯಬೇಕು. ಇದರ ಜೊತೆಗೆ ಜಿಲ್ಲೆಯೂ ಇಬ್ಬರು ಸಂಸದರನ್ನು ಆಯ್ಕೆ ಮಾಡಿದ್ದರೂ ಅವರು ಜಿಲ್ಲಾ ಅಭಿವೃದ್ಧಿ ಸಮನ್ವಯ ಹಾಗೂ ಮೇಲ್ವಿಚಾರಣಾ ಸಮಿತಿ ಸಭೆ ನಡೆಸಬೇಕು. ಆದರೆ, ಇಲ್ಲಿಯನಕ ಆ ಪ್ರಯತ್ನಗಳು ಆಗಿಲ್ಲ.

ಕಲಬುರಗಿ ಸಂಸದ ರಾಧಾಕೃಷ್ಣ ದೊಡಮನಿ ಮತ್ತು ರಾಯಚೂರು ಸಂಸದ ಜಿ.ಕುಮಾರ ನಾಯಕ ದಿಶಾ ಸಭೆ ನಡೆಸಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ಕಾಮಗಾರಿಗಳ ಪ್ರಗತಿ ನಡೆಸಬೇಕು. ಆದರೆ, ಒಬ ಸಚಿವ, ಇಬ್ಬರು ಸಂಸದರಿಗೆ ಸಭೆ ಮಾಡಲು ಸಮಯವೇ ಸಿಕ್ಕಿಲ್ಲ ಎಂದು ಬಿಜೆಪಿ ಕಾರ್ಯಕರ್ತರು ನೀಡುವ ದೂರಾಗಿದೆ.

‘ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಇದ್ದು, ಸಚಿವರು, ಸಂಸದರು ಕಾಂಗ್ರೆಸ್‌ನಿಂದ ಆಯ್ಕೆಯಾಗಿದ್ದಾರೆ. ಆದರೆ, ಸಭೆಗಳು ಮಾಡಲು ಮಾತ್ರ ಅವರಿಂದ ಸಾಧ್ಯವಾಗಿಲ್ಲ. ಸಂಸದರಾಗಿ ಆಯ್ಕೆಯಾದರೂ ಇಲ್ಲಿಯತನಕ ಸಭೆ ನಡೆಸಲು ಸಾಧ್ಯವಾಗಿಲ್ಲ ಎಂದರೆ ಏನರ್ಥ’ ಎಂದು ಪ್ರಶ್ನಿಸುತ್ತಾರೆ ಬಿಜೆಪಿ ಮುಖಂಡ ಭೀಮರೆಡ್ಡಿ ಪಾಟೀಲ.

ನಗರ ಸೇರಿದಂತೆ ಜಿಲ್ಲೆಯಲ್ಲಿ ರಸ್ತೆಗಳು ಹದಗೆಟ್ಟು ಸಂಚಾರಕ್ಕೆ ತೀವ್ರ ಪರದಾಟ ನಡೆಸುತ್ತಿದ್ದಾರೆ. ಅಲ್ಲದೇ ಬೀದಿ ದೀಪಗಳು, ಸಿಗ್ನಲ್‌ ದೀಪಗಳು, ಸಿಸಿಟಿಟಿ ಕ್ಯಾಮಾರಗಳು ಜಿಲ್ಲಾ ಕೇಂದ್ರದಲ್ಲೇ ಇಲ್ಲ. ಇನ್ನೂ ತಾಲ್ಲೂಕು ಕೇಂದ್ರಗಳ ಪರಿಸ್ಥಿತಿ ಹೇಳತೀರದಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.