ಯಾದಗಿರಿ: ಚುನಾವಣಾ ಆಯೋಗದ ನಿರ್ದೇಶನದ ಮೇರೆಗೆ ಜಿಲ್ಲೆಯ ನಾಲ್ಕು ವಿಧಾನಸಭಾ ಕ್ಷೇತ್ರಗಳ ಕರಡು ಮತದಾರರ ಪಟ್ಟಿಯನ್ನು ಎಲ್ಲಾ ಮತಗಟ್ಟೆ ಮಟ್ಟದ ಅಧಿಕಾರಿಗಳ ಕಾರ್ಯಾಲಯಗಳಲ್ಲಿ ಸಾರ್ವಜನಿಕರ ಮಾಹಿತಿಗಾಗಿ ಪ್ರಕಟಿಸಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಡಾ.ಸುಶೀಲಾ ಬಿ. ತಿಳಿಸಿದ್ದಾರೆ.
ಸುರಪುರ, ಶಹಾಪುರ, ಯಾದಗಿರಿ ಹಾಗೂ ಗುರುಮಠಕಲ್‌ನ ಮತದಾರರ ನೋಂದಣಾಧಿಕಾರಿ ಹಾಗೂ ಸಹಾಯಕ ಆಯುಕ್ತರ ಕಾರ್ಯಾಲಯ ಯಾದಗಿರಿ, ಸಹಾಯಕ ಮತದಾರರ ನೋಂದಣಾಧಿಕಾರಿ ಹಾಗೂ ತಹಶೀಲ್ದಾರರ ಕಾರ್ಯಾಲಯ ಯಾದಗಿರಿ, ಶಹಾಪುರ, ಸುರಪುರ, ವಡಗೇರಾ, ಗುರುಮಠಕಲ್ ಮತ್ತು ಹುಣಸಗಿ ತಾಲ್ಲೂಕಿನಲ್ಲಿ ಪ್ರಕಟಿಸಲಾಗಿದೆ.
ಕರಡು ಮತದಾರರ ಪಟ್ಟಿಯನ್ನು http://ceokarnataka.kar.nic.in ಹಾಗೂ ಜಿಲ್ಲೆಯ yadgir.nic.in ಅಂತರ್ಜಾಲದಲ್ಲಿ ಮತ್ತು ಜಿಲ್ಲಾಧಿಕಾರಿ ಕಾರ್ಯಾಲಯದ Facebook ನ (dcydg123@gmail.com)ನಲ್ಲಿಯೂ ಸಹ ಪರಿಶೀಲಿಸಬಹುದಾಗಿದೆ. ಕರಡು ಮತದಾರರ ಪಟ್ಟಿಯಲ್ಲಿ ಸಾರ್ವಜನಿಕರು ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಪ್ರಕಟವಾದ ಬಗ್ಗೆ ಪರಿಶೀಲಿಸಿಕೊಳ್ಳಬೇಕು.
ಒಂದು ವೇಳೆ ಅರ್ಹತಾ ದಿನಾಂಕಕ್ಕೆ ಸಂಬಂಧಿಸಿದಂತೆ ಯುವಕರು, ಯುವತಿಯರು ಅಥವಾ ಸಾರ್ವಜನಿಕರು ಹೊಸದಾಗಿ ಹೆಸರು ಸೇರ್ಪಡೆಗಾಗಿ ನಮೂನೆ-6ರಲ್ಲಿ ಅರ್ಜಿ ಸಲ್ಲಿಸಬೇಕು. ಮತದಾರರ ಪಟ್ಟಿಯಲ್ಲಿ ಹೆಸರಿದ್ದು ಅವರುಗಳು ಸ್ಥಳಾಂತರ ಹೊಂದಿದ್ದಲ್ಲಿ, ಮೃತ ಹೊಂದಿದ್ದಲ್ಲಿ, ಹೆಸರು ಪುನರಾವರ್ತನೆಯಾಗಿದ್ದಲ್ಲಿ ಅವರುಗಳ ಹೆಸರನ್ನು ತೆಗೆದು ಹಾಕಲು ನಮೂನೆ-7 ರಲ್ಲಿ, ಹೆಸರು ಇತ್ಯಾದಿ ತಿದ್ದುಪಡಿ ಬಯಸಿದ್ದಲ್ಲಿ ನಮೂನೆ-8 ರಲ್ಲ್ಲಿಸೂಕ್ತ ದಾಖಲೆಯೊಂದಿಗೆ ಅರ್ಜಿಗಳನ್ನು ಸಂಬಂಧಪಟ್ಟ ಮತಗಟ್ಟೆ ಮಟ್ಟದ ಅಧಿಕಾರಿಗೆ (ಬಿಎಲ್‌ಒ)ನವೆಂಬರ್ 28ರ ವರೆಗೆ ಹಕ್ಕು ಮತ್ತು ಆಕ್ಷೇಪಣೆಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ.
ಈ ಅವಧಿಯಲ್ಲಿ ಸ್ವೀಕರಿಸಿದ ಹಕ್ಕು ಮತ್ತು ಆಕ್ಷೇಪಣೆಯ ಅರ್ಜಿಗಳನ್ನು ನಿಯಮಾನುಸಾರ ಪರಿಶೀಲಿಸಿ ಡಿಸೆಂಬರ್ 24 ರಂದು ಕಾಲೋಚಿತಗೊಳಿಸಲಾಗುವುದು. ನಂತರ ಅಂತಿಮ ಮತದಾರರ ಪಟ್ಟಿಯನ್ನು 2025ರ ಜನವರಿ 6 ರಂದು ಪ್ರಕಟಿಸಲಾಗುವುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.