ADVERTISEMENT

ಮಕ್ತಾಪುರ: ಕುಡಿಯುವ ನೀರಿನ ಸಮಸ್ಯೆ

​ಪ್ರಜಾವಾಣಿ ವಾರ್ತೆ
Published 25 ಮಾರ್ಚ್ 2024, 14:39 IST
Last Updated 25 ಮಾರ್ಚ್ 2024, 14:39 IST
ಶಹಾಪುರ ತಾಲ್ಲೂಕಿನ ಮಕ್ತಾಪುರ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದ್ದರಿಂದ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಲಾಗುತ್ತದೆ
ಶಹಾಪುರ ತಾಲ್ಲೂಕಿನ ಮಕ್ತಾಪುರ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದ್ದರಿಂದ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಲಾಗುತ್ತದೆ   

ಶಹಾಪುರ: ತಾಲ್ಲೂಕಿನ ಮಕ್ತಾಪುರ ಗ್ರಾಮದಲ್ಲಿ ಹತ್ತು ದಿನದಿಂದ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದ್ದು, ಗ್ರಾಮ ಪಂಚಾಯಿತಿ ಸಿಬ್ಬಂದಿ ಟ್ಯಾಂಕರ್ ಮೂಲಕ ಸರಬರಾಜು ಮಾಡುತ್ತಿದ್ದಾರೆ. ಆದರೆ ಸರಬರಾಜು ಮಾಡುವ ನೀರು ಸಾಕಾಗುತ್ತಿಲ್ಲ ಎಂದು ಗ್ರಾಮಸ್ಥರು ಅರೋಪಿಸಿದ್ದಾರೆ.

ತಾಲ್ಲೂಕಿನ ಹೊತಪೇಟ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಮಕ್ತಾಪುರ ಗ್ರಾಮದಲ್ಲಿ ಸುಮಾರು 380 ಕುಟುಂಬಗಳಿವೆ. ಬೆಳಿಗ್ಗೆ ಎರಡು ಹಾಗೂ ಸಂಜೆ ಎರಡು ಟ್ಯಾಂಕರ್ ನೀರು ಸರಬರಾಜು ಮಾಡುತ್ತಿದ್ದಾರೆ. ಆದರೆ ಜಾನುವಾರುಗಳು ಹಾಗೂ ದೈನಂದಿನ ಉಪಯೋಗಕ್ಕೆ ನೀರು ಸಾಕಾಗುತ್ತಿಲ್ಲ. ಗ್ರಾಮದ ಸುತ್ತಮುತ್ತಲು ಬಾವಿ ಇವೆ. ಕುಡಿಯಲು ಯೋಗ್ಯವಿಲ್ಲ. ಅಂತರ್ಜಲಮಟ್ಟ ಕುಸಿತದಿಂದ ಕೊಳವೆಬಾವಿಯಲ್ಲಿ ನೀರಿಲ್ಲ ಮುಂದೇನು ಎಂಬ ಚಿಂತೆ ಶುರುವಾಗಿದೆ ಎಂದು ಗ್ರಾಮಸ್ಥರು ಆತಂಕ ವ್ಯಕ್ತಪಡಿಸಿದ್ದಾರೆ.

ಗ್ರಾಮದಲ್ಲಿ ಹೊಸದಾಗಿ ಕೊಳವೆಬಾವಿ ಕೊರೆಸಲಾಗಿದೆ. ಮೋಟಾರ್‌ ಅಳವಡಿಸಬೇಕಾಗಿದೆ ಎಂದು ಹೊತಪೇಟ ಗ್ರಾಮ ಪಂಚಾಯಿತಿ ಸಿಬ್ಬಂದಿಯೊಬ್ಬರು ತಿಳಿಸಿದರು

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.