ಕೆಂಭಾವಿ: ಒಂದೂವರೆ ವರ್ಷದಿಂದ ದುಡಿಯುವ ವರ್ಗ ಕೆಲಸವಿಲ್ಲದೆ ಕೊರೊನಾದಿಂದ ನಲುಗಿ ಸಂಕಷ್ಟಕ್ಕೆ ಒಳಗಾಗಿದೆ. ಅವರ ನೆರವಿಗೆ ನಿಲ್ಲುವ ಕಾರ್ಯವನ್ನು ಸರ್ಕಾರ ಮಾಡುತ್ತಿದೆ ಎಂದು ಸಂಸದ ರಾಜಾ ಅಮರೇಶ್ವರ ನಾಯಕ ಹೇಳಿದರು.
ಪಟ್ಟಣ ಸಮೀಪದ ನಗನೂರ ಗ್ರಾಮದಲ್ಲಿ ಗುರುವಾರ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ನಿಧಿ ಇವರ ಸಹಯೋಗದಲ್ಲಿ ಕಟ್ಟಡ ಕಾರ್ಮಿಕರಿಗೆ ಆಹಾರಧಾನ್ಯ ಮತ್ತು ಸುರಕ್ಷಾ ಸಾಮಗ್ರಿ ಕಿಟ್ ವಿತರಣೆ ಮಾಡಿ ಮಾತನಾಡಿದರು.
ಯಾದಗಿರಿ ಜಿಲ್ಲೆಗೆ ಸುಮಾರು 30 ಸಾವಿರ ಆಹಾರಧಾನ್ಯ ಕಿಟ್‍ಗಳು ಬಂದಿದ್ದು, ಇನ್ನೂ 35 ಸಾವಿರಕ್ಕೂ ಹೆಚ್ಚು ಕಿಟ್‍ಗಳು ಬೇಕಾಗುತ್ತವೆ ಎಂದು ಅಧಿಕಾರಿಗಳು ನನ್ನ ಗಮನಕ್ಕೆ ತಂದಿದ್ದಾರೆ. ರಾಯಚೂರ ಲೋಕಸಭಾ ಕ್ಷೇತ್ರಕ್ಕೆ ಸುಮಾರು ಒಂದು ಲಕ್ಷ ಆಹಾರಧಾನ್ಯ ಕಿಟ್‍ಗಳು ಬೇಕಾಗುತ್ತವೆ ಎಂದು ಸಚಿವ ಶಿವರಾಂ ಹೆಬ್ಬಾರ್ ಅವರಿಗೆ ಈಗಾಗಲೇ ಮನವಿ ಮಾಡಲಾಗಿದೆ. ಜಿಲ್ಲೆಯಲ್ಲಿ ನೋಂದಾಯಿತ ಕಟ್ಟಡ ಮತ್ತು ಇತರೆ ಕಾರ್ಮಿಕರಿಗೆಲ್ಲರಿಗೂ ಆಹಾರ ಕಿಟ್ ವಿತರಣೆ ಮಾಡಲಾಗುವುದು ಎಂದರು.
ಈ ಸಂದರ್ಭದಲ್ಲಿ ದಾಸೋಹ ಮಠದ ಪೀಠಾಧಿಪತಿ ಶರಣಪ್ಪ ಶರಣರು, ಸಹಾಯಕ ಕಾರ್ಮಿಕ ಆಯುಕ್ತೆ ಶ್ವೇತಾ ಎಸ್, ತಹಸೀಲ್ದಾರ ಸುಬ್ಬಣ್ಣ ಜಮಖಂಡಿ, ಮುಖಂಡರಾದ ಅಮೀನರೆಡ್ಡಿ ಪಾಟೀಲ ಯಾಳಗಿ, ಮಲ್ಲನಗೌಡ ಪಾಟೀಲ ಏವೂರ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗುರು ಕಾಮಾ, ಶಹಾಪುರ ಗ್ರಾಮೀಣ ಮಂಡಲ ಅಧ್ಯಕ್ಷ ರಾಜುಗೌಡ ಪಾಟೀಲ ಉಕ್ಕನಾಳ, ರಾಜಶೇಖರ ಸಾಹುಕಾರ ಗೂಗಲ, ಮಾಜಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಶಾಂತಣ್ಣ ಚೆನ್ನೂರ, ಕಂದಾಯ ನಿರೀಕ್ಷಕ ಲಕ್ಷ್ಮಣ ತಳವಾರ, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಶ್ರೀಶೈಲ್ ಹಳ್ಳಿ, ನಜೀರ್ ಅಹ್ಮದ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.