ADVERTISEMENT

ನಾರಾಯಣಪುರ: ಸಂಭ್ರಮದ ಹನುಮ ಜಯಂತಿ ಆಚರಣೆ

​ಪ್ರಜಾವಾಣಿ ವಾರ್ತೆ
Published 23 ಏಪ್ರಿಲ್ 2024, 14:25 IST
Last Updated 23 ಏಪ್ರಿಲ್ 2024, 14:25 IST
ನಾರಾಯಣಪುರದ ರಾಘವೇಂದ್ರ ಸ್ವಾಮಿ ಮಠದಲ್ಲಿ ಮಂಗಳವಾರ ಹನುಮ ಜಯಂತಿ ಅಂಗವಾಗಿ ತೊಟ್ಟಿಲೋತ್ಸವ ಕಾರ್ಯಕ್ರಮ ನೆರವೇರಿಸಲಾಯಿತು
ನಾರಾಯಣಪುರದ ರಾಘವೇಂದ್ರ ಸ್ವಾಮಿ ಮಠದಲ್ಲಿ ಮಂಗಳವಾರ ಹನುಮ ಜಯಂತಿ ಅಂಗವಾಗಿ ತೊಟ್ಟಿಲೋತ್ಸವ ಕಾರ್ಯಕ್ರಮ ನೆರವೇರಿಸಲಾಯಿತು   

ನಾರಾಯಣಪುರ: ಇಲ್ಲಿನ ರಾಘವೇಂದ್ರಸ್ವಾಮಿ ಮಠದಲ್ಲಿ ಮಂಗಳವಾರ ಹನುಮ ಜಯಂತಿಯನ್ನು ಸಡಗರ ಸಂಭ್ರಮದಿಂದ ಆಚರಿಸಲಾಯಿತು.

ಬೆಳಿಗ್ಗೆ ಮಠದ ಅರ್ಚಕರಾದ ರಾಘವೇಂದ್ರ ಆಚಾರ್ಯ ಜೋಶಿ ಅವರು ಹನುಮದೇವರಿಗೆ ವಿಶೇಷ ಪೂಜೆ ನೆರವೇರಿಸಿದ ನಂತರ ಹನುಮ ದೇವರ ಭಾವಚಿತ್ರವನ್ನು ಅಲಂಕರಿಸಿದ ತೊಟ್ಟಿಲಲ್ಲಿಟ್ಟು  ಛಾಯಾಭಗವತಿ ಭಜನಾಮಂಡಳಿಯ ಸದಸ್ಯರು ತೊಟ್ಟಿಲೋತ್ಸವ ಕಾರ್ಯಕ್ರಮ ನೆರವೇರಿಸಿದರು.

ಹನುಮ ಜಯಂತಿಯಲ್ಲಿ ಭಾಗವಹಿಸಿದ ಭಕ್ತರು ದೇವರ ದರ್ಶನ ಪಡೆದು ತೀರ್ಥ ಪ್ರಸಾದ ಸ್ವೀಕರಿಸಿದರು.

ADVERTISEMENT

ಈ ಸಂದರ್ಭದಲ್ಲಿ ಛಾಯಾಭಗವತಿ ಭಜನಾ ಮಂಡಳಿ ಸದಸ್ಯರಾದ ದ್ರೌಪದಿ ಜೋಶಿ, ಉಷಾ ಆದೋನಿ, ಸುಧಾ ಕೊಳ್ಳಿ, ಛಾಯಾ ಕುಲಕರ್ಣಿ, ಲತಾ ಕುಲಕರ್ಣಿ, ತೇಜಸ್ವಿ ಜೋಶಿ, ವಿದ್ಯಾ ಕುಲಕರ್ಣಿ, ಸರಸ್ವತಿ ದೇಸಾಯಿ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.