ADVERTISEMENT

ಹುಣಸಗಿ; ವಿದ್ಯಾರ್ಥಿ ಬಳಗ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 28 ಅಕ್ಟೋಬರ್ 2022, 6:35 IST
Last Updated 28 ಅಕ್ಟೋಬರ್ 2022, 6:35 IST
ಮಂಡ್ಯ ಜಿಲ್ಲೆಯಲ್ಲಿ ನಡೆದ ಅತ್ಯಾಚಾರ ಪ್ರಕರಣ ಖಂಡಿಸಿ ಹುಣಸಗಿಯಲ್ಲಿ ವಿದ್ಯಾರ್ಥಿ ಬಳಗದಿಂದ ತಹಶೀಲ್ದಾರ್‌ ಜಗದೀಶ ಚೌರ ಅವರಿಗೆ ಮನವಿ ಸಲ್ಲಿಸಲಾಯಿತು
ಮಂಡ್ಯ ಜಿಲ್ಲೆಯಲ್ಲಿ ನಡೆದ ಅತ್ಯಾಚಾರ ಪ್ರಕರಣ ಖಂಡಿಸಿ ಹುಣಸಗಿಯಲ್ಲಿ ವಿದ್ಯಾರ್ಥಿ ಬಳಗದಿಂದ ತಹಶೀಲ್ದಾರ್‌ ಜಗದೀಶ ಚೌರ ಅವರಿಗೆ ಮನವಿ ಸಲ್ಲಿಸಲಾಯಿತು   

ಹುಣಸಗಿ: ಮಂಡ್ಯ ಜಿಲ್ಲೆಯಲ್ಲಿ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಹಾಗೂ ಕೊಲೆ ಪ್ರಕರಣವನ್ನು ಖಂಡಿಸಿ ಹುಣಸಗಿಯಲ್ಲಿ ವಿದ್ಯಾರ್ಥಿ ಬಳಗದಿಂದ ಪ್ರತಿಭಟನಾ ಮೆರವಣಿಗೆ ನಡೆಯಿತು.

ವಿದ್ಯಾರ್ಥಿ ಮುತ್ತುರಾಜ ಮಾತನಾಡಿ, ಅಲ್ಲಲ್ಲಿ ವಿದ್ಯಾರ್ಥಿನಿಯರು ಸೇರಿದಂತೆ ಮಹಿಳೆಯರ ಮೇಲೆ ಹಲ್ಲೆ, ಅತ್ಯಾಚಾರ, ದೌರ್ಜನ್ಯ ಪ್ರಕರಣಗಳು ಹೆಚ್ಚಾಗುತ್ತಿವೆ. ಮಹಿಳೆಯರ ರಕ್ಷಣೆಗಾಗಿ ಕಾನೂನು ಕಟ್ಟು ನಿಟ್ಟಾಗಿ ಜಾರಿಯಾಗಬೇಕು. ಇಂತಹ ಪ್ರಕರಣದಲ್ಲಿ ಭಾಗಿಯಾದ ಆರೋಪಿಗಳಿಗೆ ಕೂಡಲೇ ತಕ್ಕ ಶಿಕ್ಷೆ ವಿಧಿಸಬೇಕು ಎಂದು ಒತ್ತಾಯಿಸಿದರು.

ವಿದ್ಯಾರ್ಥಿನಿ ಸಂಗೀತಾ ಮಾತನಾಡಿ, ನಾಗರಿಕ ಸಮಾಜ ತಲೆ ತಗ್ಗಿಸುವಂತಹ ಪ್ರಕರಣಗಳು ಹೆಚ್ಚಾಗುತ್ತಿರುವದು ಉತ್ತಮ ಬೆಳವಣಿಗೆಯಲ್ಲ. ಸರ್ಕಾರ ಮಹಿಳಾ ಸುರಕ್ಷತೆಗೆ ಹೆಚ್ಚು ಕ್ರಮ ಕೈಗೊಳ್ಳಲಿ ಎಂದು ಒತ್ತಾಯಿಸಿದರು.

ADVERTISEMENT

ವಿದ್ಯಾರ್ಥಿಗಳು ಕಪ್ಪು ಪಟ್ಟಿ ಧರಿಸಿ ಪಟ್ಟಣದ ಮಹಾಂತಸ್ವಾಮಿ ವೃತ್ತದಿಂದ ತಹಶೀಲ್ದಾರ್ ಕಚೇರಿವರೆಗೆ ಮೆರವಣಿಗೆ ನಡೆಸಿ ತಹಶೀಲ್ದಾರ್ ಜಗದೀಶ ಚೌರ್ ಅವರಿಗೆ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಶಿವರಾಜ ಮಲಗಲದಿನ್ನಿ, ಶ್ರೀದೇವಿ, ಶಬಿನಾ, ಪೂಜಾ, ಗೀತಾ, ದೇವಮ್ಮ, ಪವಿತ್ರಾ, ಅಪೂರ್ವ, ಅಜಯಕುಮಾರ, ಬಸಯ್ಯ, ಓಂಪ್ರಕಾಶ, ಬಸವರಾಜ, ಸುಮಧ್ವ, ವಿಶ್ವನಾಥ ಅಪ್ಪನಗೌಡ ಸೇರಿದಂತೆ ಇನ್ನಿತರ ವಿದ್ಯಾರ್ಥಿಗಳು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.