ADVERTISEMENT

ಯಾದಗಿರಿ | ಕಾನೂನು ಬಾಹಿರ ಚಟುವಟಿಕೆ; ಅಕ್ರಮ ಮದ್ಯದ ಬಾಟಲಿ ವಶ

​ಪ್ರಜಾವಾಣಿ ವಾರ್ತೆ
Published 9 ಆಗಸ್ಟ್ 2022, 6:54 IST
Last Updated 9 ಆಗಸ್ಟ್ 2022, 6:54 IST

ಯರಗೋಳ (ಯಾದಗಿರಿ ಜಿಲ್ಲೆ): ಹೊನಗೇರಾ ಗ್ರಾಮಕ್ಕೆ ತೆರಳುವ ಬಂದಳ್ಳಿ ಗ್ರಾಮದ ರಸ್ತೆಯಲ್ಲಿ ಸೋಮವಾರ ಕಾನೂನು ಬಾಹಿರ ಚಟುವಟಿಕೆಯಲ್ಲಿ ಭಾಗಿಯಾಗಿದ್ದ ಗ್ರಾಮದ ಇಬ್ಬರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಹಣಮಂತ ಬಸವರಾಜ (29), ಸಿದ್ದಪ್ಪ ಗುಂಜಲಪ್ಪ (30) ಆರೋಪಿಗಳಿಂದ ₹2,587 ಮೌಲ್ಯದ ಅಕ್ರಮ ಮದ್ಯದ ಬಾಟಲಿಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಯಾದಗಿರಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ದಾಖಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.