ADVERTISEMENT

ಕೀಳು ರಾಜಕೀಯ ಮಾಡುತ್ತಿರುವ ಪ್ರತಾಪ್ ಸಿಂಹ: ಭೀಮಣ್ಣ ಮೇಟಿ

ಕೆಪಿಸಿಸಿ ಸಂಯೋಜಕ ಭೀಮಣ್ಣ ಮೇಟಿ ಆಕ್ರೋಶ

​ಪ್ರಜಾವಾಣಿ ವಾರ್ತೆ
Published 2 ಜನವರಿ 2024, 14:14 IST
Last Updated 2 ಜನವರಿ 2024, 14:14 IST
ಭೀಮಣ್ಣ ಮೇಟಿ
ಭೀಮಣ್ಣ ಮೇಟಿ   

ಯಾದಗಿರಿ: ‘ಅಕ್ರಮವಾಗಿ ಮರ ಕಡಿದ ಆರೋಪದ ಮೇಲೆ ವಿಕ್ರಂ ಸಿಂಹ ಎನ್ನುವವರನ್ನು ಬಂಧಿಸಲಾಗಿತ್ತು. ಆದರೆ, ಬಂಧನದ ಹಿಂದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕೈವಾಡವಿದೆ ಎಂದು ಹೇಳುವ ಮೂಲಕ ಸಂಸದ ಪ್ರತಾಪ್ ಸಿಂಹ ಕೀಳುಮಟ್ಟದ ರಾಜಕೀಯ ಮಾಡುತ್ತಿದ್ದಾರೆ’ ಎಂದು ಕೆಪಿಸಿಸಿ ಸಂಯೋಜಕ ಭೀಮಣ್ಣ ಮೇಟಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು,‘ಮರ ಕಡಿದ ಆರೋಪದ ಹಿನ್ನೆಲೆಯಲ್ಲಿ ಬಂಧಿಸಲಾಗಿತ್ತು. ಸುಖಾಸುಮ್ಮನೇ ಯಾರನ್ನೂ ಕೂಡ ಬಂಧಿಸಲು ಆಗುವುದಿಲ್ಲ. ಇದನ್ನು ಸಂಸದರು ಅರಿತುಕೊಳ್ಳುವುದು ಅಗತ್ಯ’ ಎಂದಿದ್ದಾರೆ.

ಮೈಸೂರು ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಸಿಎಂ ಅವರು ತಮ್ಮ ಮಗನನ್ನು ನಿಲ್ಲಿಸಲು ಮುಂದಾಗಿದ್ದಾರೆ. ಹೀಗಾಗಿಯೇ ರಾಜಕೀಯವಾಗಿ ಸೇಡು ತೀರಿಸಿಕೊಳ್ಳುತ್ತಿದ್ದಾರೆ ಎಂದಿದ್ದಾರೆ. ಆದರೆ, ಸಂಸದ ಪ್ರತಾಪ್ ಸಿಂಹ ಅವರಿಗೆ ಸೋಲಿನ ಭಯ ಶುರುವಾಗಿದೆ. ಹೀಗಾಗಿಯೇ ಸುಳ್ಳು ರಾಜಕೀಯ ಮಾಡುತ್ತಿದ್ದಾರೆ. ಇವರಿಗೆ ಮುಂದಿನ ದಿನಗಳಲ್ಲಿ ಜನರು ತಕ್ಕ ಪಾಠ ಕಲಿಸಲಿದ್ದಾರೆ ಎಂದು ತಿಳಿಸಿದ್ದಾರೆ.

ADVERTISEMENT

ಸಂಸದರಿಗೆ ಆಡಳಿತ ವಿರೋಧಿ ಅಲೆ ವಿಪರೀತವಾಗಿ ಕಾಡುತ್ತಿದೆ. ಹೀಗಾಗಿಯೇ ಪ್ರಕರಣದಲ್ಲಿ ಸಿಎಂ ಹೆಸರು ಎಳೆದು ತರುತ್ತಿದ್ದಾರೆ. ರಾಜಕೀಯವಾಗಿ ಲಾಭ ಮಾಡಿಕೊಳ್ಳಲು ಮುಂದಾಗಿದ್ದಾರೆ. ಆದರೆ, ಜನ ಎಂದಿಗೂ ಇವರ ಆಟವನ್ನು ಕೊನೆ ನಿಲ್ಲಿಸಿದೆ ಬಿಡುವುದಿಲ್ಲ ಎಂದು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.