ಸುರಪುರ: ‘ತಾಲ್ಲೂಕಿನ ಕರಡಕಲ್ ಮತ್ತು ಕಿರದಳ್ಳಿ ಗ್ರಾಮ ಪಂಚಾಯಿತಿಗಳ ಸಾರ್ವತ್ರಿಕ ಚುನಾವಣೆಗೆ ಸರ್ಕಾರ ವೇಳಾ ಪಟ್ಟಿ ಪ್ರಕಟಿಸಿದೆ.
‘ಇಂದಿನಿಂದ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭಗೊಂಡಿದ್ದು, ನವೆಂಬರ್ 27 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ. 28 ರಂದು ನಾಮಪತ್ರಗಳ ಪರಿಶೀಲನೆ, 30 ನಾಮಪತ್ರ ಹಿಂತೆಗೆತ, ಡಿಸೆಂಬರ್ 8 ರಂದು ಬೆಳಿಗ್ಗೆ 7 ಗಂಟೆಯಿಂದ ಸಂಜೆ 5 ಗಂಟೆವರೆಗೆ ಮತದಾನ ನಡೆಯಲಿದೆ’ ಎಂದು ತಹಶೀಲ್ದಾರ್ ಎಚ್.ಎ. ಸರಕಾವಸ ತಿಳಿಸಿದ್ದಾರೆ.
‘ಡಿ.11 ರಂದು ಮತ ಎಣಿಕೆ ನಡೆಯಲಿದೆ. ಕರಡಕಲ್ ಗ್ರಾಮ ಪಂಚಾಯಿತಿಗೆ ಸಮಾಜ ಕಲ್ಯಾಣಾಧಿಕಾರಿ ಸಲೀಂ ಅವರನ್ನು, ಕಿರದಳ್ಳಿ ಗ್ರಾಮ ಪಂಚಾಯಿತಿಗೆ ಬಿಸಿಎಂ ಇಲಾಖೆ ಅಧಿಕಾರಿ ತಿಪ್ಪಾರೆಡ್ಡಿ ಮಾಲಿಪಾಟೀಲ ಅವರನ್ನು ಚುನಾವಣಾಧಿಕಾರಿಗಳಾಗಿ ನೇಮಿಸಲಾಗಿದೆ’ ಎಂದು ಅವರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.