ವಡಗೇರಾ: ಮತದಾರರ ಪಟ್ಟಿ ಸಂಕ್ಷಿಪ್ತ ಪರಿಷ್ಕರಣೆ 2025ರ ಸಂಬಂಧ ಇದೇ ನವೆಂಬರ್ 9, 10, 23 ಹಾಗೂ 24ರಂದು ವಿಶೇಷ ಮಿಂಚಿನ ಮತದಾರರ ನೋಂದಣಿ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ತಹಶೀಲ್ದಾರ್ ಶ್ರೀನಿವಾಸ ಚಾಪೇಲ್ ತಿಳಿಸಿದ್ದಾರೆ.
ಈ ಕುರಿತು ಹೇಳಿಕೆ ನೀಡಿರುವ ಅವರು, ತಾಲ್ಲೂಕಿನ ಎಲ್ಲಾ ಮತಗಟ್ಟೆ ಅಧಿಕಾರಿಗಳು ಹಾಗೂ ಮತಗಟ್ಟೆ ಮೇಲ್ವಿಚಾರಕರು ತಮ್ಮ ಕೇಂದ್ರ ಸ್ಥಾನದಲ್ಲಿ ಹಾಜರಿರಬೇಕು. ಮತದಾರರ ನಮೂನೆ 6, 7 ಹಾಗೂ 8 ಸಂಗ್ರಹ ಮಾಡಬೇಕೆಂದು ಜಿಲ್ಲಾಧಿಕಾರಿ ಆದೇಶವಿರುವುದರಿಂದ ಎಲ್ಲಾ ಗ್ರಾಮ ಆಡಳಿತ ಅಧಿಕಾರಿಗಳು, ಕಂದಾಯ ನಿರೀಕ್ಷಕರು ಹಾಗೂ ಉಪ ತಹಶೀಲ್ದಾರರು ತಮ್ಮ ಕೇಂದ್ರ ಸ್ಥಾನಗಳಲ್ಲಿ ಹಾಜರಿದ್ದು, ಈ ವಿಶೇಷ ಮಿಂಚಿನ ನೋಂದಣಿ ಅಭಿಯಾನ ಯಶಸ್ವಿಗೊಳಿಸಬೇಕು ಎಂದು ಮಾಹಿತಿ ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.