ಶಹಾಪುರ (ಯಾದಗಿರಿ ಜಿಲ್ಲೆ): ತಾಲ್ಲೂಕಿನ ದೋರನಹಳ್ಳಿ ಗ್ರಾಮದ ಎಎಂಡಿ ಕ್ಯಾಂಪಿನ ಬಳಿ ಹಳೆ ವೈಷಮ್ಯದಿಂದ ಜಾಪಾನಾಯಕ ತಾಂಡಾದ ತಿಪ್ಪಣ್ಣ (35) ಅವರನ್ನು ಮಾರಾಕಾಸ್ತ್ರದಿಂದ ದುಷ್ಕರ್ಮಿಗಳು ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿದ್ದಾರೆ.
ಪ್ರತ್ಯಕ್ಷದರ್ಶಿಗಳ ಪ್ರಕಾರ, ಶನಿವಾರ ತಿಪ್ಪಣ್ಣ ಬೈಕ್ ಮೇಲೆ ತೆರಳುತ್ತಿದ್ದಾಗ ಮಚ್ಚಿನಿಂದ ತಲೆ, ಕತ್ತಿಗೆ ಬಲವಾಗಿ ದುಷ್ಕರ್ಮಿಗಳು ಹೊಡೆದಿದ್ದಾರೆ.
ನಂತರ ಶಿಳ್ಳೆ ಕೂಗು ಹಾಕುತ್ತಾ ಟೋಕಾಪುರ ರಸ್ತೆ ಮೂಲಕ ತೆರಳಿದರು ಎಂದು ಹೆಸರು ಹೇಳಲಿಚ್ಛಿಸದ ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ. ಸ್ಥಳಕ್ಕೆ ಶಹಾಪುರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.