ಯಾದಗಿರಿ: ಜಿಲ್ಲೆಯ ಹುಣಸಗಿ ತಾಲ್ಲೂಕಿನ ನಾರಾಯಣಪುರ ಬಸವಸಾಗರ ಜಲಾಶಯದಿಂದ 1.20 ಲಕ್ಷ ಕ್ಯುಸೆಕ್ ನೀರು ಕೃಷ್ಣಾ ನದಿಗೆ ಹರಿಸಲಾಗುತ್ತಿದ್ದು, ನದಿ ಪಾತ್ರದ ಹಳ್ಳಿಗಳಲ್ಲಿ ಸಾರ್ವಜನಿಕರಿಗೆ ಪೊಲೀಸರು ಜಾಗೃತಿ ಮೂಡಿಸಿದರು.
ಹುಣಸಗಿ ತಾಲ್ಲೂಕಿನ ಕೊಡೇಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಕೃಷ್ಣಾ ನದಿ ಪಾತ್ರದ ಹಳ್ಳಿಗಳಲ್ಲಿ ಸಾರ್ವಜನಿಕರಿಗೆ ನಾರಾಯಣಪುರ ಡ್ಯಾಂ ನಿಂದ ಮಂಗಳವಾರ ಮಧ್ಯಾಹ್ನ 12 ಗಂಟೆಯಿಂದ 1.50 ಲಕ್ಷ ಕ್ಯುಸೆಕ್‌ಗಿಂತ ಅಧಿಕ ನೀರು ಬಿಡುತ್ತಿದ್ದು, ಸಾರ್ವಜನಿಕರು ಮತ್ತು ಜಾನುವಾರುಗಳು ನದಿಯ ಸಮೀಪ ಹೋಗದಂತೆ ಡಂಗೂರ ಬಾರಿಸಿದರು.
ಸ್ವಚ್ಛತಾ ವಾಹಿನಿ ವಾಹನದ ಮೂಲಕ ಮೈಕ್‌ನಲ್ಲಿ ಎಚ್ಚರಿಕೆ ನೀಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.