ಯಾದಗಿರಿ: ನಗರದ ಗಣೇಶ್ ನಗರ ನಿವಾಸಿ ಹೇಮನಾರಾಯಣ ಶರ್ಮಾ ತಮ್ಮ ಮೊಬೈಲ್‌ಗೆ ಬಂದ ಒಟಿಪಿ ಸಂಖ್ಯೆ ನೀಡಿ ₹2 ಲಕ್ಷ ಹಣವನ್ನು ಕಳೆದುಕೊಂಡಿದ್ದಾರೆ.
ಘಟನೆ ವಿವರ: ಫ್ಲಿಪ್‌ಕಾರ್ಟ್ ನಲ್ಲಿ ಬಟ್ಟೆ ಆರ್ಡರ್ ಮಾಡಿಅದುಇಷ್ಟವಾಗದ ಕಾರಣ ಆರ್ಡರ್ ಅನ್ನು ರದ್ದು ಮಾಡಿದರೂ ಹಣ ಬಾರದೇ ಇರುವ ಕಾರಣ ಗೂಗಲ್‌ನಲ್ಲಿ ಫ್ಲಿಪ್‌ಕಾರ್ಟ್ ಕಸ್ಟಮರ್ ಕೇರ್ ನಂಬರ್ ಹುಡುಕಿ ಸಂಖ್ಯೆ ಕರೆ ಮಾಡಿವಿಚಾರಿಸಿದ್ದಾರೆ. ಅವರು ಬ್ಯಾಂಕ್‌ಗೆ ಸಂಬಂಧಪಟ್ಟ ವಿಷಯ ಕೇಳಿದ ಕಾರಣ ಮಾಹಿತಿ ನೀಡಿದ್ದಾರೆ. ಮೊಬೈಲ್‌ಗೆ ಒಟಿಪಿ ಬಂದಿದ್ದು, ಅದನ್ನು ಅವರೊಂದಿಗೆ ಹಂಚಿಕೊಂಡಿದ್ದಾರೆ. ನಂತರ ಅವರು ಬ್ಯಾಂಕ್ ಖಾತೆಯಿಂದ ಸುಮಾರು ಎರಡು ಲಕ್ಷ ರೂಪಾಯಿಗಳನ್ನು ವರ್ಗಾವಣೆ ಮಾಡಿಕೊಂಡಿರುತ್ತಾರೆ ಎಂದು ಶರ್ಮಾ ದೂರಿನಲ್ಲಿ ತಿಳಿಸಿದ್ದಾರೆ.
ಈ ಕುರಿತು ಸೈಬರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
‘ಸಾರ್ವಜನಿಕರು ಅಪರಿಚಿತ ರೊಂದಿಗೆ ತಮ್ಮ ಬ್ಯಾಂಕಿಗೆ ಸಂಬಂಧಪಟ್ಟ ಯಾವುದೇ ವಿಷಯಗಳನ್ನು ಹಂಚಕೊಳ್ಳಬಾರದು. ಯಾರಿಗೂ ತಮ್ಮ ಒಟಿಪಿ ಹಂಚಿಕೊಳ್ಳಬಾರದು. ತಾವು ಕಷ್ಟಪಟ್ಟು ದುಡಿದ ಹಣವನ್ನು ಮೋಸಗಾರರಲ್ಲಿ ಕಳೆದುಕೊಳ್ಳಬಾರದು’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಾಹಿತಿ ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.