ADVERTISEMENT

ಫ.ಗು.ಹಳಕಟ್ಟಿ ಕೊಡುಗೆ ಅಪಾರ: ಜಗದೀಶ ನೂಲಿನವರ

​ಪ್ರಜಾವಾಣಿ ವಾರ್ತೆ
Published 2 ಜುಲೈ 2024, 14:36 IST
Last Updated 2 ಜುಲೈ 2024, 14:36 IST
ನಾರಾಯಣಪುರದ ಮಾತೋಶ್ರೀ ನಿಂಬೆಮ್ಮ ಪದವಿ ಕಾಲೇಜಿನಲ್ಲಿ ಮಂಗಳವಾರ ಫ.ಗು.ಹಳಕಟ್ಟಿ ಜಯಂತಿ ಆಚರಿಸಲಾಯಿತು
ನಾರಾಯಣಪುರದ ಮಾತೋಶ್ರೀ ನಿಂಬೆಮ್ಮ ಪದವಿ ಕಾಲೇಜಿನಲ್ಲಿ ಮಂಗಳವಾರ ಫ.ಗು.ಹಳಕಟ್ಟಿ ಜಯಂತಿ ಆಚರಿಸಲಾಯಿತು   

ನಾರಾಯಣಪುರ: ಇಲ್ಲಿನ ಮಾತೋಶ್ರೀ ನಿಂಬೆಮ್ಮ ಪದವಿ ಕಾಲೇಜಿನಲ್ಲಿ ಮಂಗಳವಾರ ಫ.ಗು. ಹಳಕಟ್ಟಿ ಜಯಂತಿ ಆಚರಿಸಲಾಯಿತು.

ಪ್ರಾಂಶುಪಾಲ ಜಗದೀಶ ನೂಲಿನವರ ಮಾತನಾಡಿ, ‘ಫ.ಗು. ಹಳಕಟ್ಟಿ ಅವರದು ವೈವಿಧ್ಯಮಯ ವ್ಯಕ್ತಿತ್ವ. ಶಿಕ್ಷಣ, ಸಾಹಿತ್ಯ ಮತ್ತು ಸಹಕಾರ ಕ್ಷೇತ್ರಗಳಿಂದ ಬಾಳು ಬಂಗಾರ ಎಂದು ತಿಳಿದವರು. ಕನ್ನಡ ಮತ್ತು ಕರ್ನಾಟಕ ಅವರ ಉಸಿರಾಗಿತ್ತು’ ಎಂದರು.

‘1925ರಲ್ಲಿ ತಾಡೋಲೆಗಳನ್ನು ಮುದ್ರಿಸಲು ಇರುವ ಮನೆ ಮಾರಾಟ ಮಾಡಿ ಹಿತಚಿಂತಕ ಮುದ್ರಣಾಲಯ ಸ್ಥಾಪಿಸಿದರು. ಒಂದು ವೇಳೆ ಶರಣ ಸಾಹಿತ್ಯದ ಕಡೆಗೆ ಲಕ್ಷ್ಯ ಹರಿಸದೆ ಇದ್ದರೆ ಇಂದು ನಮಗೆ ಶಿವಶರಣರ ವಚನಗಳು ದೊರಕುತ್ತಿರಲಿಲ್ಲ’ ಎಂದು ಹೇಳಿದರು.

ADVERTISEMENT

ಉಪನ್ಯಾಸಕರಾದ ಇಸ್ಮಾಯಿಲ್, ಶೇಖರಯ್ಯ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.