ADVERTISEMENT

PSI ಪರಶುರಾಮ್ ಸಾವು: ಶಾಸಕ, ಪುತ್ರನ ವಿರುದ್ಧ ಜಾತಿ ನಿಂದನೆ ಪ್ರಕರಣ ದಾಖಲು

​ಪ್ರಜಾವಾಣಿ ವಾರ್ತೆ
Published 3 ಆಗಸ್ಟ್ 2024, 8:22 IST
Last Updated 3 ಆಗಸ್ಟ್ 2024, 8:22 IST
<div class="paragraphs"><p>ಪಿಎಸ್ಐ&nbsp;ಪರಶುರಾಮ್ </p></div>

ಪಿಎಸ್ಐ ಪರಶುರಾಮ್

   

ಯಾದಗಿರಿ: ನಗರ ಠಾಣೆ ಪಿಎಸ್ಐ ಮೃತ ಪರಶುರಾಮ್ ಪತ್ನಿ ಶ್ವೇತಾ ಅವರು ನೀಡಿದ ದೂರಿನ್ವಯ ಶಾಸಕ ಚನ್ನಾರೆಡ್ಡಿ ಪಾಟೀಲ ತುನ್ನೂರು‍, ಅವರ ಪುತ್ರ ಪಂಪನಗೌಡ (ಸನ್ನಿಗೌಡ) ವಿರುದ್ಧ ನಗರ ಠಾಣೆಯಲ್ಲಿ ಜಾತಿ ನಿಂದನೆ ಪ್ರಕರಣ ದಾಖಲಾಗಿದೆ.

ಕಲಂ 352, 108 (3), 5, ಬಿಎನ್ಎಸ್ 2023 ಮತ್ತು ಕಲಂ 3(1), (ಆರ್), (ಎಸ್), 3 (ವಿ) ಸೇರಿದಂತೆ ಎಸ್‌ಸಿ, ಎಸ್‌ಟಿ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ADVERTISEMENT

ಮರಣೋತ್ತರ ಪರೀಕ್ಷೆ: ನಗರ ಹೊರವಲಯದ ಜಿಲ್ಲಾಸ್ಪತ್ರೆಯಲ್ಲಿ ಮೃತ ಪರಶುರಾಮ್ ಮರಣೋತ್ತರ ಪರೀಕ್ಷೆ ಮಾಡಲಾಯಿತು. ನಂತರ ಕುಟುಂಬಸ್ಥರಿಗೆ ಶವ ಹಸ್ತಾಂತರಿಸಲಾಯಿತು.

ಶಾಸಕರ ಜನಸಂಪರ್ಕ ಕಚೇರಿಗೆ ಪೊಲೀಸ್ ಬಂದೋಬಸ್ತ್: ನಗರ ಠಾಣೆ ಪಿಎಸ್ಐ ಪರಶುರಾಮ್ ಸಾವಿನ ಪ್ರಕಟಣದಲ್ಲಿ ಶಾಸಕ ಚನ್ನಾರೆಡ್ಡಿ ಪಾಟೀಲ, ಅವರ ಪುತ್ರ ಪಂಪನಗೌಡ ವಿರುದ್ಧ ಆರೋಪಗಳು ಬಲವಾಗಿ ಕೇಳಿ ಬಂದಿರುವ ಹಿನ್ನೆಲೆಯಲ್ಲಿ ಶನಿವಾರ ಬೆಳಿಗ್ಗೆ ನಗರದ ಲಾಲ್ ಬಹಾದ್ದೂರ್ ಶಾಸ್ತ್ರಿ ವೃತ್ತದಲ್ಲಿರುವ ಶಾಸಕರ ಕಚೇರಿಗೆ ಪೊಲೀಸರು ಬಿಗಿ ಬಂದೋಬಸ್ತ್ ಕಲ್ಪಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.