ADVERTISEMENT

ರಾಜನಕೋಳೂರು ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

​ಪ್ರಜಾವಾಣಿ ವಾರ್ತೆ
Published 29 ಅಕ್ಟೋಬರ್ 2024, 15:43 IST
Last Updated 29 ಅಕ್ಟೋಬರ್ 2024, 15:43 IST
ಹುಣಸಗಿ ತಾಲ್ಲೂಕಿನ ರಾಜನಕೋಳೂರು ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿ ರೇಣುಕಾ ಯಲ್ಲಮ್ಮ
ಹುಣಸಗಿ ತಾಲ್ಲೂಕಿನ ರಾಜನಕೋಳೂರು ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿ ರೇಣುಕಾ ಯಲ್ಲಮ್ಮ    

ಹುಣಸಗಿ: ತಾಲ್ಲೂಕಿನ ರಾಜನಕೋಳೂರು ಗ್ರಾಮದ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಯಾದಗಿರಿಯಲ್ಲಿ ಮಂಗಳವಾರ ನಡೆದ ಜಿಲ್ಲಾ ಮಟ್ಟದ ಅಥ್ಲೆಟಿಕ್ಸ್‌ನಲ್ಲಿ ಉತ್ತಮ ಸಾಧನೆ ಮಾಡಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ ಎಂದು ಶಾಲೆಯ ಮುಖ್ಯಶಿಕ್ಷಕ ಶಿವರಾಜ ಬಿರಾದಾರ ತಿಳಿಸಿದ್ದಾರೆ.

ಶಾಲೆಯ 9ನೇ ತರಗತಿಯ ವಿದ್ಯಾರ್ಥಿನಿ ರೇಣುಕಾ ಯಲ್ಲಮ್ಮ ಎತ್ತರ ಜಿಗಿತದಲ್ಲಿ ಹಾಗೂ ರಾಮುನಾಯಕ ಜಾಧವ ತ್ರಿಬಲ್ ಜಂಪಿಂಗ್‌ನಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ವಿದ್ಯಾರ್ಥಿಗಳ ಸಾಧನೆಗೆ ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷರು, ಸದಸ್ಯರು ಹಾಗೂ ಗ್ರಾಮಸ್ಥರು ಹರ್ಷ ವ್ಯಕ್ತಪಡಿಸಿದ್ದಾರೆ.

ADVERTISEMENT
ರಾಜ್ಯಮಟ್ಟಕ್ಕೆ ಆಯ್ಕೆಯಾದ ಹುಣಸಗಿ ತಾಲ್ಲೂಕಿನ ರಾಜನಕೋಳೂರು ಸರ್ಕಾರಿ ಪ್ರೌಢಶಾಲೆಯ ರಾಮುನಾಯಕ ಜಾಧವ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.