ADVERTISEMENT

ಶಿಕ್ಷಕರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ: ಶಿವಬಸಪ್ಪ ಮಾಲಿಪಾಟೀಲ

ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳ ಆಯ್ಕೆ

​ಪ್ರಜಾವಾಣಿ ವಾರ್ತೆ
Published 22 ಜುಲೈ 2024, 13:53 IST
Last Updated 22 ಜುಲೈ 2024, 13:53 IST
ಯಾದಗಿರಿ ನಗರದ ಹಳೆ ಪ್ರವಾಸಿ ಮಂದಿರದಲ್ಲಿ ಕರ್ನಾಟಕ ರಾಜ್ಯ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು
ಯಾದಗಿರಿ ನಗರದ ಹಳೆ ಪ್ರವಾಸಿ ಮಂದಿರದಲ್ಲಿ ಕರ್ನಾಟಕ ರಾಜ್ಯ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು    

ಯಾದಗಿರಿ: ‘ಶಿಕ್ಷಕರ ಪರವಾಗಿ ಕ್ರಿಯಾಶೀಲತೆಯಿಂದ ಸಮಸ್ಯೆಗಳಿಗೆ ಸ್ಪಂದಿಸುವ ಮೂಲಕ ಉತ್ತಮ ಕಾರ್ಯ ನಿರ್ವಹಿಸಲು ಸದಾ ಸಿದ್ಧ’ ಎಂದು ಕರ್ನಾಟಕ ರಾಜ್ಯ ಅನುದಾನಿತ ಶಾಲಾ ಶಿಕ್ಷಕರ ಸಂಘ ನೂತನ ಜಿಲ್ಲಾಧ್ಯಕ್ಷ ಶಿವಬಸಪ್ಪ ಮಾಲಿಪಾಟೀಲ ‌ಹೇಳಿದರು.

ನಗರದ ಹಳೆ ಪ್ರವಾಸಿ ಮಂದಿರದಲ್ಲಿ ಭಾನುವಾರ ನಡೆದ ಜಿಲ್ಲಾ ಸಂಘದ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಯಾಗಿ ಬಳಿಕ ಅವರು ಮಾತನಾಡಿದರು.

‘ಅನುದಾನಿತ ಶಾಲಾ ಶಿಕ್ಷಕರ ಸಮಸ್ಯೆಗಳನ್ನು ಬಗೆಹರಿಸಲು ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ಎಲ್ಲರೂ ಒಗ್ಗಟ್ಟಿನಿಂದ ಇದ್ದು, ಸಂಘಟನೆಗೆ ಬೆಲೆ ನೀಡೋಣ’ ಎಂದು ಹೇಳಿದರು.

ADVERTISEMENT

ಗೌರವಾಧ್ಯಕ್ಷ ಅಪ್ಪರಾವ್ ಸಂಕೊಳ್ಳಿ, ಜಿಲ್ಲಾ ಉಪಾಧ್ಯಕ್ಷ ಶ್ರೀನಿವಾಸ ಆನಂಪಲ್ಲಿ, ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಕಟ್ಟಿಮನಿ, ಖಜಾಂಚಿ ಗಿರೀಶಮಾಲಿ ಪಾಟೀಲ, ಸಹ ಕಾರ್ಯದರ್ಶಿಗಳಾಗಿ ಪ್ರಕಾಶ ಬಾವೂರ, ಸಂಘಟನಾ ಕಾರ್ಯದರ್ಶಿ ಚಂದ್ರಶೇಖರ ಸಾಹು, ಅನುದಾನಿತ ಶಾಲಾ ಕಾಲೇಜು ನೌಕರರ ಸಂಘದ ಅಧ್ಯಕ್ಷ ಚುನ್ನು ಪಟೇಲ್, ಯಾದಗಿರಿ ತಾಲ್ಲೂಕು ಅಧ್ಯಕ್ಷ ಶರಣು ಮರಕಲ್, ಸುರಪುರ ತಾಲ್ಲೂಕಿನ ಅಧ್ಯಕ್ಷ ಗೋಪಾಲ ನಾಯಕ ಜಾಗಿರದಾರ್ ಬಸವರಾಜ ಅಲೆಮನೆ, ಸುರೇಶ್ ಕಡಿ, ಪರಶುರಾಮ ನಾಯಕ, ಮಲ್ಲಿಕಾರ್ಜುನ ಆಂದೇಲಿ, ರವಿ ಇಟಗಿ, ತಿಪ್ಪಣ್ಣ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.