ಕೆಂಭಾವಿ (ಯಾದಗಿರಿ ಜಿಲ್ಲೆ): ಅಮಲಿಹಾಳ ಗ್ರಾಮದಲ್ಲಿ ಶನಿವಾರ ಪರಿಶಿಷ್ಟ ಜಾತಿ ಮತ್ತು ಪಂಗಡದ 10 ಜನರು ಪೊಲೀಸ್ ಭದ್ರತೆಯಲ್ಲಿ ಹನುಮಾನ್ ದೇವಸ್ಥಾನ ಪ್ರವೇಶಿಸಿ, ಪೂಜೆ ಸಲ್ಲಿಸಿದರು.
ಪರಿಶಿಷ್ಟ ಜಾತಿ ಮತ್ತು ಪಂಗಡದವರು ದೇವಾಲಯ ಪ್ರವೇಶಿಸುವುದಕ್ಕೆ ಲಿಂಗಾಯತ ಸಮುದಾಯದವರ ವಿರೋಧವಿತ್ತು. ಇದರಿಂದ ಅಮಲಿಹಾಳ ಮತ್ತು ಪಕ್ಕದ ಹೂವಿನಹಳ್ಳಿಯಲ್ಲಿ ಕೆಲದಿನಗಳಿಂದ ಸಂಘರ್ಷಮಯ ವಾತಾವರಣ ಇತ್ತು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವೇದಮೂರ್ತಿ ಶುಕ್ರವಾರ ಗ್ರಾಮಗಳಿಗೆ ಭೇಟಿ ನೀಡಿ, ಗ್ರಾಮಸ್ಥರ ಮನವೊಲಿಕೆಗೆ ಪ್ರಯತ್ನಿಸಿದ್ದರು. ಶನಿವಾರ ಪರಿಸ್ಥಿತಿ ವಿಕೋಪಕ್ಕೆ ಹೋಗುವ ಸಾಧ್ಯತೆಯಿದ್ದ ಕಾರಣ ಜಿಲ್ಲಾಡಳಿತ ಎರಡೂ ಗ್ರಾಮಗಳಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿತ್ತು.
ಎರಡೂ ಗ್ರಾಮಗಳಲ್ಲಿ ಪರಿಸ್ಥಿತಿ ಇನ್ನೂ ಬೂದಿಮುಚ್ಚಿದ ಕೆಂಡದಂತಿದ್ದು, ಪೊಲೀಸ್ ಬಿಗಿ ಬಂದೋಬಸ್ತ್ ಇದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.