ADVERTISEMENT

ಯಾದಗಿರಿ: ರೈತ ಸಂಪರ್ಕ ಕೇಂದ್ರಗಳಲ್ಲಿ ಬಿತ್ತನೆ ಬೀಜ ಲಭ್ಯ

​ಪ್ರಜಾವಾಣಿ ವಾರ್ತೆ
Published 2 ಜೂನ್ 2024, 16:06 IST
Last Updated 2 ಜೂನ್ 2024, 16:06 IST

ಯಾದಗಿರಿ: ಜಿಲ್ಲೆಯ ಎಲ್ಲಾ ರೈತ ಸಂಪರ್ಕ ಕೇಂದ್ರಗಳಲ್ಲಿ, ರಿಯಾಯಿತಿ ದರದಲ್ಲಿ ಬಿತ್ತನೆ ಬೀಜಗಳು ಲಭ್ಯವಿದ್ದು, ಆಧಾರ್ ಪ್ರತಿ, ಪಹಣಿ, ಮತ್ತು ಜಾತಿ ಪ್ರಮಾಣ ಪತ್ರ (ಪ.ಜಾ, ಪ.ಪಂ. ರೈತರಿಗೆ ಮಾತ್ರ) ನೀಡಿ ಬಿತ್ತನೆ ಬೀಜಗಳನ್ನು ಪಡೆಯಬಹುದಾಗಿದೆ. ಎಂದು ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.

ರಸಗೊಬ್ಬರಗಳ ಕಾಪು ದಾಸ್ತಾನು ಕರ್ನಾಟಕ ರಾಜ್ಯ ಮಾರಾಟ ಮಂಡಳಿ ಮತ್ತು ಕರ್ನಾಟಕ ರಾಜ್ಯ ಬೀಜ ನಿಗಮದಲ್ಲಿ ಯೂರಿಯಾ 1,477, ಡಿಎಪಿ 1,907, ಕಾಂಪ್ಲೆಕ್ಸ್ 1,784, ಎಂಎಪಿ 999 ಒಟ್ಟಾರೆ 6,166 ಮೆ.ಟನ್ ವಿವಿಧ ರಸಗೊಬ್ಬರಗಳು ದಾಸ್ತಾನೀಕರಿಸಲಾಗಿದೆ. ರಸಗೊಬ್ಬರದ ಯಾವುದೇ ರೀತಿಯ ಕೊರತೆ ಇಲ್ಲ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT