ADVERTISEMENT

ಯಾದಗಿರಿ | ಎಸ್ಸೆಸ್ಸೆಲ್ಸಿ ಪರೀಕ್ಷೆ: 495 ವಿದ್ಯಾರ್ಥಿಗಳು ಗೈರು

ಏಪ್ರಿಲ್ 6ರವರೆಗೆ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ

​ಪ್ರಜಾವಾಣಿ ವಾರ್ತೆ
Published 25 ಮಾರ್ಚ್ 2024, 14:38 IST
Last Updated 25 ಮಾರ್ಚ್ 2024, 14:38 IST
ಯಾದಗಿರಿ ನಗರದ ಪದವಿ ಪೂರ್ವ ಕಾಲೇಜಿನಲ್ಲಿ ಪರೀಕ್ಷೆ ಬರೆಯಲು ಬಂದ ವಿದ್ಯಾರ್ಥಿನಿಯರು ಗೆಲುವಿನ ಸಂಕೇತ ತೋರಿಸಿದರು
ಯಾದಗಿರಿ ನಗರದ ಪದವಿ ಪೂರ್ವ ಕಾಲೇಜಿನಲ್ಲಿ ಪರೀಕ್ಷೆ ಬರೆಯಲು ಬಂದ ವಿದ್ಯಾರ್ಥಿನಿಯರು ಗೆಲುವಿನ ಸಂಕೇತ ತೋರಿಸಿದರು   

ಯಾದಗಿರಿ: ಜಿಲ್ಲೆಯ 59 ಪರೀಕ್ಷಾ ಕೇಂದ್ರಗಳಲ್ಲಿ 2023-24ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆ ಸೋಮವಾರ ಆರಂಭಗೊಂಡಿದ್ದು, 495 ವಿದ್ಯಾರ್ಥಿಗಳು ಗೈರಾಗಿದ್ದಾರೆ. ಇದರ ಜೊತೆಗೆ ಪರೀಕ್ಷಾ ಕೊಠಡಿ ಮೇಲ್ವಿಚಾರಕರು ಅಮಾನತಾಗಿದ್ದಾರೆ.

ಪ್ರಥಮ ಭಾಷೆ ಪರೀಕ್ಷೆಗೆ 18,253 ವಿದ್ಯಾರ್ಥಿಗಳು ಹೆಸರು ನೋಂದಾಯಿಸಿಕೊಂಡಿದ್ದರು. ಇದರಲ್ಲಿ ರೆಗ್ಯೂಲರ್‌ ವಿದ್ಯಾರ್ಥಿಗಳು 17,139, ಪುನರಾವರ್ತಿತ ಅಭ್ಯರ್ಥಿಗಳು 619 ಇದ್ದರು. 17,758 ಹಾಜರಾಗಿ, 400 ರೆಗ್ಯೂಲರ್‌ ವಿದ್ಯಾರ್ಥಿಗಳು, 95 ಪುನರಾವರ್ತಿತ ಅಭ್ಯರ್ಥಿಗಳು ಗೈರಾಗಿದ್ದಾರೆ.

ಶಹಾಪುರ–ವಡಗೇರಾ ತಾಲ್ಲೂಕಿನಲ್ಲಿ 136, ಸುರಪುರ–ಹುಣಸಗಿ ತಾಲ್ಲೂಕಿನಲ್ಲಿ 211, ಯಾದಗಿರಿ–ಗುರುಮಠಕಲ್‌ ತಾಲ್ಲೂಕಿನಲ್ಲಿ 148 ವಿದ್ಯಾರ್ಥಿಗಳು ಗೈರಾಗಿದ್ದಾರೆ.

ADVERTISEMENT
ಯಾದಗಿರಿ ನಗರದ ಪದವಿ ಪೂರ್ವ ಕಾಲೇಜಿನಲ್ಲಿ ನೋಟಿಸ್‌ ಬೋರ್ಡ್‌ ಪರಿಶೀಲಿಸಿದ ವಿದ್ಯಾರ್ಥಿಗಳು 

ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಸೇರಿದಂತೆ ಒಟ್ಟು 269 ಪ್ರೌಢಶಾಲೆಗಳ ಎಲ್ಲ ವಿಷಯಗಳ 19,575 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದರು.

ಯಾದಗಿರಿ, ಶಹಾಪುರ, ಸುರಪುರ ತಾಲ್ಲೂಕು ವ್ಯಾಪ್ತಿಯಲ್ಲಿ 59 ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆ.

ಯಾದಗಿರಿ ನಗರದ ನ್ಯೂ ಕನ್ನಡ ಪ್ರೌಢಶಾಲೆಗೆ ಪರೀಕ್ಷೆ ಬರೆಯಲು ಬಂದ ವಿದ್ಯಾರ್ಥಿಗಳು

ಜಿಪಂ ಸಿಇಒ ವಿವಿಧೆಡೆ ಭೇಟಿ

ರಾಜ್ಯಾದ್ಯಂತ ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆಗಳು ಆರಂಭಗೊಂಡಿದ್ದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಗರಿಮಾ ಪಂವಾರ್ ನಗರದಲ್ಲಿರುವ ವಿವಿಧ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲಿಸಿದರು. ಬಹುತೇಕ ಜಿಲ್ಲೆಯ ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಕ್ಯಾಮರಾ ಅಳವಡಿಸಿದ್ದು ಅಲ್ಲಿಯ ನೇರ ದೃಶ್ಯಾವಳಿಗಳನ್ನು ಜಿಲ್ಲಾ ಪಂಚಾಯಿತಿಯಿಂದಲೇ ವೀಕ್ಷಿಸುವ ವೆಬ್‌ಕಾಸ್ಟಿಂಗ್‌ ವ್ಯವಸ್ಥೆ ಮಾಡಲಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.