ADVERTISEMENT

SSLC Exam | ನಕಲು ಮಾಡಲು ಸಹಕರಿಸಿದ ಆರೋಪ: ಇಬ್ಬರು ಕೊಠಡಿ ಮೇಲ್ವಿಚಾರಕರ ಅಮಾನತು

​ಪ್ರಜಾವಾಣಿ ವಾರ್ತೆ
Published 25 ಮಾರ್ಚ್ 2024, 14:37 IST
Last Updated 25 ಮಾರ್ಚ್ 2024, 14:37 IST

ಯಾದಗಿರಿ: ಜಿಲ್ಲೆಯ ಸುರಪುರ ಮತ್ತು ಹುಣಸಗಿ ಎಸ್ಸೆಸ್ಸೆಲ್ಸಿ ಪರೀಕ್ಷಾ ಕೇಂದ್ರದಲ್ಲಿ ನಕಲು ಮಾಡಲು ಸಹಕರಿಸಿದ ಆರೋಪದ ಮೇಲೆ ಇಬ್ಬರು ಶಿಕ್ಷಕರನ್ನು ಅಮಾನತುಗೊಳಿಸಿ ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಎಚ್‌.ಟಿ.ಮಂಜುನಾಥ್ ಆದೇಶ ಹೊರಡಿಸಿದ್ದಾರೆ.

ಜಿಲ್ಲೆಯ ಹುಣಸಗಿ ಸರ್ಕಾರಿ ಪದವಿ ಪೂರ್ವ ಕಾಲೇಜು ಬಾಲಕರ ಪರೀಕ್ಷಾ ಕೇಂದ್ರದಲ್ಲಿ ಸಾಹೇಬಗೌಡ ಉಕ್ಕಾಲಿ ಕಾರ್ಯ ನಿರ್ವಹಣೆ ಮಾಡುತ್ತಿದ್ದರು. ಸುರಪುರ ಸರ್ಕಾರಿ ಪದವಿಪೂರ್ವ ಕಾಲೇಜು ಬಾಲಕರ ಪರೀಕ್ಷಾ ಕೇಂದ್ರದಲ್ಲಿ ಹನುಮಂತರಾಯ ಕೊಠಡಿ ಮೇಲ್ವಿಚಾರಕರಾಗಿ ಕಾರ್ಯನಿರ್ವಹಿಸುತ್ತಿದ್ದರು. ಆದರೆ, ಇವರು ನಕಲು ತಡೆಗೆ ಮುಂದಾಗದ ಕಾರಣ ಅಮಾನತುಗೊಳಿಸಲಾಗಿದೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT