ಸುರಪುರ: ತಾಲ್ಲೂಕು ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಸ್ಥಾನಕ್ಕೆ ಮತ್ತು ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೂ ಶ್ರವಣಕುಮಾರ ನಾಯಕ ಡೊಣ್ಣಿಗೇರಿ ರಾಜೀನಾಮೆ ಸಲ್ಲಿಸಿದ್ದಾರೆ.
ರಾಜೀನಾಮೆ ಪತ್ರವನ್ನು ಬಿಜೆಪಿ ಮಂಡಲ ಅಧ್ಯಕ್ಷ ಮೇಲಪ್ಪ ಗುಳಗಿ ಅವರಿಗೆ ಮಂಗಳವಾರ ಸಲ್ಲಿಸಿದ್ದಾರೆ.
ಬಿಜೆಪಿಯಲ್ಲಿ ಪ್ರಾಮಾಣಿಕ, ನಿಷ್ಠಾವಂತ ಕಾರ್ಯಕರ್ತರಿಗೆ ಬೆಲೆ ಇಲ್ಲ. ಪಕ್ಷದಲ್ಲಿ ಯಾವುದೇ ನಿರ್ಧಾರ ತೆಗೆದುಕೊಳ್ಳುವ ಮುನ್ನ ವಿಷಯ ತಿಳಿಸುವುದಿಲ್ಲ. ಅಧ್ಯಕ್ಷ ಸ್ಥಾನಕ್ಕೆ ಬೆಲೆ ಸಿಗುತ್ತಿಲ್ಲ. ಅಧಿಕಾರದಲ್ಲಿರುವ ಸ್ಥಳೀಯ ನಾಯಕರ ನಡೆಗೆ ಬೇಸತ್ತು, ಮನನೊಂದು ಸ್ವಇಚ್ಚೆಯಿಂದ ರಾಜೀನಾಮೆ ಸಲ್ಲಿಸಿದ್ದೇನೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.