ಶಹಾಪುರ (ಯಾದಗಿರಿ ಜಿಲ್ಲೆ): 2024-25ನೇ ಸಾಲಿನ ಹಿಂಗಾರು ಹಂಗಾಮಿಗಾಗಿ ನೀರಾವರಿ ಸಲಹಾ ಸಮಿತಿ (ಐಸಿಸಿ) ಸಭೆಯನ್ನು ನ.16ರಂದು ಬೆಳಿಗ್ಗೆ 11 ಗಂಟೆಗೆ ಆಲಮಟ್ಟಿಯಲ್ಲಿನ ಕೃಷ್ಣಾ ಭಾಗ್ಯ ಜಲ ನಿಗಮದ ವ್ಯವಸ್ಥಾಪಕ ನಿರ್ದೇಶಕರ ಭಾಂಗಣದಲ್ಲಿ ಸಮಿತಿ ಅಧ್ಯಕ್ಷ ಆರ್.ಬಿ.ತಿಮ್ಮಾಪುರ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ ಎಂದು ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪ ದರ್ಶನಾಪುರ ತಿಳಿಸಿದ್ದಾರೆ.
ಈ ಕುರಿತು ಮಾಹಿತಿ ನೀಡಿದ ಅವರು, ಮುಂಗಾರು ಹಂಗಾಮಿನ ಬೆಳೆಗೆ ಕಾಲುವೆ ನೀರು ಹರಿಸುವುದು (ನ.13) ಮುಕ್ತಾಯಗೊಳ್ಳದೆ. ಅದರಂತೆ ಹಿಂಗಾರು ಹಂಗಾಮಿನ ಬೆಳೆಗೆ ಎಷ್ಟು ದಿನಗಳ ಕಾಲ ನೀರು ಹರಿಸುವ ಪ್ರಮುಖ ನಿರ್ಧಾರವನ್ನು ಸಭೆಯಲ್ಲಿ ಚರ್ಚಿಸಿ ರೈತರಿಗೆ ಅನುಕೂಲವಾಗುವ ರೀತಿಯಲ್ಲಿ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಅವರು ಮಾಹಿತಿ ನೀಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.