ADVERTISEMENT

ರೈತರ ಭೂಮಿ ಕಬಳಿಸುವ ಹುನ್ನಾರ: ಕೋಡಿಹಳ್ಳಿ ಚಂದ್ರಶೇಖರ್

ವಿಶ್ವ ರೈತ ದಿನಾಚರಣೆ; ರೈತರಿಗೆ ಪೂರಕವಾದ ಕಾನೂನು ರೂಪಿಸಲಿ

​ಪ್ರಜಾವಾಣಿ ವಾರ್ತೆ
Published 16 ಫೆಬ್ರುವರಿ 2021, 3:45 IST
Last Updated 16 ಫೆಬ್ರುವರಿ 2021, 3:45 IST
ಶಹಾಪುರ ತಾಲ್ಲೂಕಿನ ಭೀಮರಾಯನಗುಡಿ ಕೃಷಿ ಮಹಾ ವಿದ್ಯಾಲಯದ ಸಭಾಂಗಣದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ವಿಶ್ವ ರೈತ ದಿನಾಚರಣೆ ಕಾರ್ಯಕ್ರಮದಲ್ಲಿ ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಮಾತನಾಡಿದರು
ಶಹಾಪುರ ತಾಲ್ಲೂಕಿನ ಭೀಮರಾಯನಗುಡಿ ಕೃಷಿ ಮಹಾ ವಿದ್ಯಾಲಯದ ಸಭಾಂಗಣದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ವಿಶ್ವ ರೈತ ದಿನಾಚರಣೆ ಕಾರ್ಯಕ್ರಮದಲ್ಲಿ ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಮಾತನಾಡಿದರು   

ಭೀಮರಾಯನಗುಡಿ (ಶಹಾಪುರ): ‘ಕೇಂದ್ರ ಮತ್ತು ರಾಜ್ಯ ಬಿಜೆಪಿ ಸರ್ಕಾರಗಳು ರೈತರ ಜಮೀನು ಕಬಳಿಸುವ ಹುನ್ನಾರದಿಂದ ವಿವಾದಿತ ಮೂರು ಕಾಯ್ದೆಯನ್ನು ಜಾರಿಗೆ ತಂದಿರುವುದು ದುರಾದೃಷ್ಟಕರ. ಪ್ರಧಾನಮಂತ್ರಿ ನರೇಂದ್ರ ಮೋದಿ ಸ್ವಪ್ರತಿಷ್ಠೆ ಬಿಟ್ಟು ರೈತರಿಗೆ ಪೂರಕವಾದ ಕಾನೂನು ರೂಪಿಸಲಿ’ ಎಂದು ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರಾಜ್ಯ ಘಟಕದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಒತ್ತಾಯಿಸಿದರು.

ತಾಲ್ಲೂಕಿನ ಭೀಮರಾಯನಗುಡಿ ಕೃಷಿ ಮಹಾ ವಿದ್ಯಾಲಯದ ಸಭಾಂಗ ಣದಲ್ಲಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಸಂಘದ ಆಶ್ರಯದಲ್ಲಿ ಸೋಮವಾರ ಹಮ್ಮಿ ಕೊಂಡಿದ್ದ ವಿಶ್ವ ರೈತ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಸಾರಿಗೆ ನೌಕರರ ಪೂರ್ಣ ಪ್ರಮಾಣದ ಬೇಡಿಕೆಯನ್ನು ಈಡೇರಿಸಬೇಕು. ರೈತರು ಬೆಳೆದ ಬೆಳೆಗೆ ಯೋಗ್ಯ ಬೆಲೆಯನ್ನು ನೀಡಬೇಕು. ರೈತರಿಗೆ ವಂಚನೆ ಮಾಡಬಾರದು. ಹವಾಮಾನಕ್ಕೆ ತಕ್ಕಂತೆ ಬೆಳೆಗಳನ್ನು ಬೆಳೆಯಲು ಸ್ಥಳಗಳನ್ನು ಗುರುತಿಸಿ ಅಂತಹ ಬೆಳೆಗಳನ್ನು ಬೆಳೆಯಲು ಪ್ರೋತ್ಸಾಹಿಸಬೇಕು. ಜೊತೆಗೆ ಸೂಕ್ತ ಮಾರುಕಟ್ಟೆ ಒದಗಿಸಬೇಕು ಎಂದು ಮನವಿ ಮಾಡಿದರು.

ADVERTISEMENT

ರೈತರ ತಾಳ್ಮೆ ಕಳೆದುಕೊಳ್ಳುವ ಮುಂಚೆ ಸರ್ಕಾರ ಎಚ್ಚೆತ್ತುಕೊಂಡು ರೈತರ ನೆರವಿಗೆ ಆಗಮಿಸಬೇಕು ಎಂದರು.

ಜಿಲ್ಲಾ ಘಟಕದ ಅಧ್ಯಕ್ಷ ಮಹೇಶ ಸುಬೇದಾರ ಮುಂದಾಳತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮರಳ ಮಹಾಂತ ಶಿವಚಾರ್ಯರು, ಸಗರ ಸೋಮೇಶ್ವರ ಶಿವಾಚಾರ್ಯರು, ಲಕ್ಷ್ಮಿಪುರದ ಚೆನ್ನ ಮಲ್ಲಿಕಾರ್ಜುನ ಸ್ವಾಮೀಜಿ, ರಾಮಣ್ಣಗೌಡ ದೊಡ್ಮನಿ, ಶಾಂತಗೌಡ , ಬಸವಂತರೆಡ್ಡಿ ಸಾಹು, ಬಸಣ್ಣಗೌಡ ಚಿಂಚೊಳ್ಳಿ, ಮಹಾದೇವಿ ಬೇವಿನಹಳ್ಳಿ, ರಾಹುಲ್ , ಎಂ.ಡಿ ಪವರ್, ಸಂಗಣ್ಣ ಮೂಡಬೂಳ, ಶಿವರೆಡ್ಡಿ ಮಲ್ಲೇದ್, ಶಂಕರ್ ಪಡಶೆಟ್ಟಿ ಇದ್ದರು.

ರೈತರ ಪಾದಪೂಜೆ ಮಾಡಲಾಯಿತು. ಉತ್ತಮ ಸಾಧನೆಗೈದ ರೈತರಿಗೆ ಮತ್ತು ಯೋಧರಿಗೆ ಸನ್ಮಾನಿಸಲಾಯಿತು.

ಇದಕ್ಕೂ ಮೊದಲು ಹೊಸ ಬಸ್ ನಿಲ್ದಾಣದಿಂದ ಬೈಕ್, ಎತ್ತಿನ ಬಂಡಿ, ಟ್ರ್ಯಾಕ್ಟರ್ ರ‍್ಯಾಲಿ ಮೂಲಕ ಚರಬಸವೇಶ್ವರ ಕಮಾನವರೆಗೆ ಮೆರವಣಿಗೆ ನಡೆಸಲಾಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.